ಪುತ್ತೂರು: ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದಲ್ಲಿ ನಡೆದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಭೂತಾರಾಧನೆ-ಜಾನಪದೀಯ ಅಧ್ಯಯನ, ಜಾಲಾಟ, ಸಂಸ್ಕೃತಿ ಸಿರಿ, ತುಳುಮಾನ್ಯ ಹಾಗೂ ಇನ್ನಿತರ ಕೃತಿಗಳು ಡಾ.ಚಿನ್ನಪ್ಪ ಗೌಡರ ಸಾಹಿತ್ಯ ಕೃತಿಗಳಾಗಿವೆ. ಈ ಹಿಂದೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶಿವರಾಮ ಕಾರಂತ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಕುಶಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಅವರಿಗೆ ಲಭಿಸಿದೆ.