ಪುತ್ತೂರು: ತಾಲೂಕಿನ ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ, ಸರ್ವೆ ಷಣ್ಮುಖ ಯುವಕ ಮಂಡಲದ ಮಾಜಿ ಅಧ್ಯಕ್ಷ, ರಾಜೇಶ್ ಎಸ್. .ಡಿ (45) ಸೋಮವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ್ದ ರಾಜೇಶ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.