ಹನಿಟ್ರ್ಯಾಪ್‌ ತನಿಖೆಗೆ ಆಗ್ರಹಿಸಿದ್ದ ಅರ್ಜಿದಾರನಿಗೆ ಸುಪ್ರೀಂ ಕೋರ್ಟ್‌ ಹಿಗ್ಗಾಮುಗ್ಗಾ ತರಾಟೆ

ಇಷ್ಟಕ್ಕೂ ಸರ್ವೋಚ್ಚ ನ್ಯಾಯಾಲಯದಲ್ಲಿ ಇಂದು ನಡೆದದ್ದೇನು?

ನವದೆಹಲಿ: ದೇಶವಿಡೀ ಸುದ್ದಿ ಮಾಡುತ್ತಿರುವ ಕರ್ನಾಟಕದ ಸಚಿವರು ಮತ್ತು ನ್ಯಾಯಾಧೀಶರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣದ ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರನನ್ನು ಸುಪ್ರೀಂ ಕೋರ್ಟ್‌ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆದಿದೆ.
ಹನಿಟ್ರ್ಯಾಪ್‌ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಜಾಗೊಳಿಸಿ ಅರ್ಜಿದಾರನನ್ನು ತರಾಟೆಗೆತ್ತಿಕೊಂಡಿದೆ.
ಸುಪ್ರೀಂ ಕೋರ್ಟ್‌ನ ನ್ಯಾ.ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಿಚಾರಣೆಗೊಳಪಡಿಸಿ ವಜಾಗೊಳಿಸಿತು. ವಿಚಾರಣೆ ವೇಳೆ ಅರ್ಜಿದಾರ ಬಿನಯ್ ಕುಮಾರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿತು.
ನೀವು ಜಾರ್ಖಂಡ್ ಮೂಲದವರು, ಕರ್ನಾಟಕಕ್ಕೂ ನಿಮಗೂ ಏನು ಸಂಬಂಧ? ಪೊಲಿಟಿಕಲ್ ನಾನ್‌ಸೆನ್ಸ್‌ಗಳನ್ನು ವಿಚಾರಣೆ ನಡೆಸಲು ನಾವು ಇಲ್ಲಿ ಕೂತಿಲ್ಲ. ನ್ಯಾಯಾಧೀಶರು ಯಾಕೆ ಹನಿಟ್ರ‍್ಯಾಪ್‌ಗೆ ಒಳಗಾಗುತ್ತಾರೆ? ಹಾಗೇನಾದರೂ ಇದ್ದರೆ ಅದನ್ನು ನ್ಯಾಯಾಧೀಶರು ನೋಡಿಕೊಳ್ತಾರೆ. ಇಂತಹ ಅರ್ಜಿ ವಿಚಾರಣೆ ನಡೆಸಿಕೊಂಡು ಕೂರಲು ನಮಗೆ ಸಮಯವಿಲ್ಲ. ಸುಪ್ರೀಂ ಕೋರ್ಟ್‌ಗೆ ಮಾಡಲು ಸಾಕಷ್ಟು ಕೆಲಸ ಇದೆ ಎಂದು ಬಿನಯ್ ಕುಮಾರ್‌ ಅವರನ್ನು ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡಿದೆ.

ಕರ್ನಾಟಕದಲ್ಲಿ ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಗುರಿಯಾಗಿಟ್ಟುಕೊಂಡು ಹನಿಟ್ರ‍್ಯಾಪ್ ಪ್ರಕರಣ ನಡೆದಿದೆ. ಈ ಬಗ್ಗೆ ಸಚಿವರೇ ವಿಧಾನಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹೀಗಾಗಿ ಈ ಬಗ್ಗೆ ಸಿಬಿಐ ಅಥವಾ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಎಸ್‌ಐಟಿ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಸುಪ್ರೀಂಗೆ ಮನವಿ ಮಾಡಿದ್ದರು. ಅದರೆ ತನಗೆ ಸಂಬಂಧ ಇಲ್ಲದ ವಿಚಾರದ ಮೇಲೆ ತನಿಖೆಗೆ ಆಗ್ರಹಿಸಿ ಅರ್ಜಿದಾರ ಛೀಮಾರಿ ಹಾಕಿಸಿಕೊಂಡಿದ್ದಾರೆ.

































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top