ಏಪ್ರಿಲ್‌ನಿಂದ ಟೋಲ್‌ ಸುಂಕ ಹೆಚ್ಚಳ

ಶೇ.5ರಷ್ಟು ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರ

ಬೆಂಗಳೂರು : ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ವಾಹನ ಮಾಲೀಕರಿಗೆ ಈಗ ಟೋಲ್‌ ಸುಂಕ ಏರಿಕೆ ಬಿಸಿ ತಟ್ಟಲಿದೆ. ಏಪ್ರಿಲ್ 1ರಿಂದ ಕರ್ನಾಟಕಾದ್ಯಂತ ಟೋಲ್ ಸುಂಕ ಶೇ.3ರಿಂದ 5ರಷ್ಟು ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.

ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಈಗ ಟೋಲ್ ಸುಂಕ ಹೆಚ್ಚಳಕ್ಕೆ ಎನ್​ಎಚ್​​ಎಐ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಟೋಲ್​ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ.5ರಷ್ಟು ಹೆಚ್ಚಳವಾಗಲಿದೆ. ಕರ್ನಾಟಕದಲ್ಲಿ 66 ಟೋಲ್ ಪ್ಲಾಜಾಗಳಿವೆ. ಟೋಲ್ ಸುಂಕ ಹೆಚ್ಚಾಗುವ ಟೋಲ್ ಪ್ಲಾಜಾಗಳಲ್ಲಿ ಕಣಿಮಿಣಿಕೆ ಮತ್ತು ಶೇಷಗಿರಿಹಳ್ಳಿ (ಬೆಂಗಳೂರು-ಮೈಸೂರು), ನಂಗ್ಲಿ (ಬೆಂಗಳೂರು-ತಿರುಪತಿ), ಬಾಗೇಪಲ್ಲಿ (ಬೆಂಗಳೂರು-ಹೈದರಾಬಾದ್), ಸಾದಹಳ್ಳಿ (ಬೆಂಗಳೂರು ವಿಮಾನ ನಿಲ್ದಾಣ ರಸ್ತೆ), ಮತ್ತು ಹುಲಿಕುಂಟೆ ಮತ್ತು ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ) ಟೋಲ್ ಪ್ಲಾಜಾಗಳು ಸೇರಿವೆ.

































 
 

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಸ್ತೆ ಬಳಕೆದಾರರಿಗೆ ಕೆಲವು ರಿಯಾಯಿತಿಗಳನ್ನು ನೀಡುವ ಉದ್ದೇಶದೊಂದಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕಗಳಿಗೆ ಹೊಸ ನೀತಿಯನ್ನು ಪರಿಚಯಿಸಲು ಸಜ್ಜಾಗಿದೆ. ಈ ವಿಚಾರವಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾರ್ಚ್ 19ರಂದು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದರು. 2023-24 ರಲ್ಲಿ ಭಾರತದಲ್ಲಿ ಒಟ್ಟು ಟೋಲ್ ಸಂಗ್ರಹ 64,809.86 ಕೋಟಿ ರೂ. ತಲುಪಿದೆ. ಇದು ಹಿಂದಿನ ವರ್ಷಕ್ಕಿಂತ ಶೇ.35 ರಷ್ಟು ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಎಲ್ಲಾ ಟೋಲ್ ಪ್ಲಾಜಾಗಳನ್ನು ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳು-2008 ಮತ್ತು ಸಂಬಂಧಿತ ರಿಯಾಯಿತಿ ಒಪ್ಪಂದದ ಪ್ರಕಾರ ಸ್ಥಾಪಿಸಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top