ಹೊಸ, ತಾತ್ಕಾಲಿಕ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಸಬೇಕು
ಬೆಂಗಳೂರು: ರಾಜ್ಯದಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಕೇಂದ್ರ ಇಂಧನ ಸಚಿವಾಲಯ ಫೆ.22ರಂದು ಹೊರಡಿಸಿದ್ದ ಅಧಿಸೂಚನೆ ಅನ್ವಯ ಕರ್ನಾಟಕ ಮತ್ತು ತೆಲಂಗಾಣ ಬಿಟ್ಟು ಬೇರೆ ಎಲ್ಲ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಜಾರಿಗೆ ತರಲಾಗಿದೆ. ಇತ್ತೀಚೆಗೆ ಕೇಂದ್ರ ಇಂಧನ ಸಚಿವರನ್ನು ಭೇಟಿ ಮಾಡಿದಾಗಲೂ ಸ್ಮಾರ್ಟ್ ಮೀಟರ್ ಅಳವಡಿಸಲು ಸೂಚಿಸಿದ್ದಾರೆ ಎಂದು ತಿಳಿಸಿದರು.
ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಪ್ರಕ್ರಿಯೆಯಲ್ಲಿ 15,568 ಕೋಟಿ ರೂ. ಭ್ರಷ್ಟಾಚಾರವಾಗಿದೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು, ಸ್ಮಾರ್ಟ್ ಮೀಟರ್ ಪೂರೈಕೆಗೆ ಬೆಸ್ಕಾಂನವರು ಮೂರು ಪಾರ್ಟ್ ಟೆಂಡರ್ ಕರೆದಿದ್ದಾರೆ. ಒಬ್ಬರು ಸ್ಮಾರ್ಟ್ ಮೀಟರ್ ಅಳವಡಿಸುತ್ತಾರೆ. ಸಿಮ್ ಕಾರ್ಡ್ ಹಾಕುವವರು ಬೇರೆ ಇರ್ತಾರೆ. ಟೆಂಡರ್ ಕೊಟ್ಟಿದ್ರಲ್ಲಿ ತಪ್ಪಾಗಿದ್ರೆ ತಡೆಯುತ್ತೇವೆ. ರಾಜ್ಯದಲ್ಲಿ ಕಪ್ಪು ಪಟ್ಟಿಗೆ ಸೇರಿದ ಕಂಪನಿಗಳು ಸ್ಮಾರ್ಟ್ ವಿದ್ಯುತ್ ಮೀಟರ್ ಪೂರೈಕೆ ಮಾಡುತ್ತಿವೆ ಎಂಬ ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ್ ಅವರ ಆರೋಪವನ್ನು ತಳ್ಳಿಹಾಕಿದ ಕೆ.ಜೆ ಜಾರ್ಜ್, ಇದು ಸಂಪೂರ್ಣ ತಪ್ಪು. ಮೀಟರ್ ಪೂರೈಕೆ ಮಾಡುತ್ತಿರುವ ಕಂಪನಿಗಳು ಕಪ್ಪು ಪಟ್ಟಿಯಲ್ಲಿ ಇಲ್ಲ ಎಂದರು.
ಉತ್ತರ ಪ್ರದೇಶ ಸರ್ಕಾರ ಎರಡು ವರ್ಷಗಳ ಕಾಲ ಕಂಪನಿಯನ್ನು ನಿರ್ಬಂಧಿಸಿದೆ, ಆದರೆ ಆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿಲ್ಲ. ಯುಪಿ ಸರ್ಕಾರ ನಿರ್ಬಂಧ ಹೇರಿದಾಗ ತನಿಖೆ ಮತ್ತು ದಂಡ ವಿಧಿಸುವುದು ಸರ್ಕಾರದ ಕರ್ತವ್ಯವಾಗಿತ್ತು. ಇತರ 16 ರಾಜ್ಯಗಳು ಸಂಸ್ಥೆಗೆ ಗುತ್ತಿಗೆ ನೀಡಿವೆ ಎಂದು ಸಚಿವರು ಹೇಳಿದರು.
ಏನಿದು ಸ್ಮಾರ್ಟ್ ಮೀಟರ್?
ಸ್ಮಾರ್ಟ್ ವಿದ್ಯುತ್ ಮೀಟರ್ ಒಂದು ರೀತಿಯಲ್ಲಿ ಮೊದಲೇ ಪಾವತಿಸಿ ವಿದ್ಯುತ್ ಬಳಸುವ ವ್ಯವಸ್ಥೆ. ಈ ನೂತನ ವ್ಯವಸ್ಥೆಯಲ್ಲಿ ಮೊಬೈಲ್ ಫೋನ್‌ಗಳ ಮಾದರಿಯಲ್ಲೇ ವಿದ್ಯುತ್ ಬಳಕೆಗೂ ಪ್ರೀಪೇಯ್ಡ್ ರೀಚಾರ್ಜ್ ಕಾರ್ಡ್ ಪರಿಚಯಿಸಲಾಗುತ್ತಿದೆ. ಗ್ರಾಹಕರು, ಪ್ರೀಪೇಯ್ಡ್ ಮೊಬೈಲ್ ಸಿಮ್ ಮಾದರಿಯಲ್ಲಿ ಮೊದಲೇ ಹಣ ಕಟ್ಟಿ ವಿದ್ಯುತ್ ಸಂಪರ್ಕ ಪಡೆಯಬೇಕಾಗುತ್ತದೆ. ಪ್ರೀಪೇಯ್ಡ್ ಸಿಮ್ ಕಾರ್ಡ್‌ಗಳ ರೀತಿಯಲ್ಲೇ ಪ್ರೀಪೇಯ್ಡ್ ಸ್ಮಾರ್ಟ್ ಮೀಟರ್‌ಗಳೂ ಕಾರ್ಯ ನಿರ್ವಹಿಸುತ್ತವೆ.
ಪ್ರೀಪೇಯ್ಡ್ ಸಿಮ್ ಕಾರ್ಡ್‌ಗಳನ್ನು ರೀಚಾರ್ಜ್ ಮಾಡಿಸಿ ತಮಗೆ ಬೇಕಾದಷ್ಟು ಟಾಕ್ ಟೈಮ್ ಹಾಗೂ ಇಂಟರ್‌ನೆಟ್ ಡೇಟಾ ಪಡೆಯಬಹುದು. ಹಾಗೆಯೇ, ಗ್ರಾಹಕರು ಪ್ರೀಪೇಯ್ಡ್ ವಿದ್ಯುತ್ ಮೀಟರ್‌ಗಳನ್ನು ಆನ್‌ಲೈನ್ ಮೂಲಕ ಅಥವಾ ಸಮೀಪದ ವಿದ್ಯುತ್ ವಿತರಣಾ ಕಚೇರಿಗಳಲ್ಲಿ ರೀಚಾರ್ಜ್ ಮಾಡಿಸಿ ತಮಗೆ ಬೇಕಾದಷ್ಟು ಯೂನಿಟ್‌ಗಳನ್ನು ಪಡೆಯಬಹುದು.
ದೇಶದ ಹಲವು ರಾಜ್ಯಗಳು ಈಗಾಗಲೇ ಪ್ರೀಪೇಯ್ಡ್ ಸ್ಮಾರ್ಟ್ ವಿದ್ಯುತ್ ಮೀಟರ್ ವ್ಯವಸ್ಥೆ ಜಾರಿಗೊಳಿಸಿವೆ. ರಾಜ್ಯದಲ್ಲೂ ಈ ವ್ಯವಸ್ಥೆಯ ಜಾರಿಗೆ ಕೆಇಆರ್‌ಸಿ ಆದೇಶ ಹೊರಡಿಸಿದೆ. ಕೈಗಾರಿಕೆ, ಗೃಹ ಬಳಕೆ, ವಾಣಿಜ್ಯ ಉದ್ದೇಶ ಸೇರಿದಂತೆ ಎಲ್ಲಾ ಬಗೆಯ ವಿದ್ಯುತ್ ಸಂಪರ್ಕಗಳಿಗೆ ಪ್ರೀಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಸಲಾಗುತ್ತದೆ. ಸ್ಮಾರ್ಟ್ ಮೀಟರ್‌ನಲ್ಲಿ ವಿದ್ಯುತ್ ಬಳಕೆ, ವೋಲ್ಟೇಜ್ ಮಟ್ಟ, ಲೋಡ್ ಮತ್ತಿತರ ತಾಂತ್ರಿಕ ಅಂಶಗಳ ಮಾಹಿತಿ ದಾಖಲಾಗುತ್ತದೆ. ಈ ಮಾಹಿತಿಯನ್ನು ಸರ್ವರ್‌ಗೆ ರವಾನಿಸಲಾಗುತ್ತದೆ.ರೂ.ಸಿಂಗಲ್ ಫೇಸ್ ಸ್ಮಾರ್ಟ್ ಮೀಟರ್‌ಗೆ 4,998 ರೂ. ಪಾವತಿಬೇಕು ಮತ್ತು 75 ರೂ.
ಗ್ರಾಹಕರು ನಿರ್ವಹಣಾ ಶುಲ್ಕ ವಿದ್ಯುತ್ ಬಿಲ್ ಜತೆಗೆ ಭರಿಸಬೇಕು.