ಹೊಸ ಹಣಕಾಸು ವರ್ಷದಿಂದ ಬ್ಯಾಂಕಿಂಗ್ ನಿಯಮಗಳಲ್ಲಿ ಹಲವು ಬದಲಾವಣೆ
ನವದೆಹಲಿ: ಏಪ್ರಿಲ್ 1ರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ತರ ಬದಲಾವಣೆ ತಂದಿದ್ದು, ಎಟಿಎಂ ಕ್ಯಾಷ್ ವಿತ್ಡ್ರಾ ಶುಲ್ಕ ಹೆಚ್ಚಳ, ಎಸ್‌ಬಿ ಖಾತೆ ಹಣಕ್ಕೆ ಹೆಚ್ಚು ಬಡ್ಡಿ ಸೇರಿದಂತೆ ಹಲವು ನಿಯಮಗಳಲ್ಲಿ ಪರಿಷ್ಕರಣೆ ತಂದಿದೆ.
ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿದ್ದು, ಎಟಿಎಂ ಹಣ ಹಿಂಪಡೆಯುವಿಕೆ, ಉಳಿತಾಯ ಖಾತೆಗೆ ಸಂಬಂಧಿಸಿದ ನಿಯಮಗಳಲ್ಲಿ ಆರ್‌ಬಿಐ ಸಾಕಷ್ಟು ಬದಲಾವಣೆ ಮಾಡಿದೆ. ಎಟಿಎಂ ಹಣ ವಿತ್‌ಡ್ರಾಗೆ ಸಂಬಂಧಿಸಿದಂತೆ ವಿಧಿಸುತ್ತಿದ್ದ ಶುಲ್ಕ ಹೆಚ್ಚಳ ಸೇರಿದಂತೆ ಕೆಲ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್ ನಿಯಮಗಳವರೆಗೆ ಬದಲಾವಣೆಗಳಾಗುತ್ತಿವೆ.
ರಾಷ್ಟ್ರೀಯ ಪಾವತಿ ನಿಗಮ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್, ಮೇ 1, 2025ರಿಂದ ಜಾರಿಗೆ ಬರುವಂತೆ ನಗದು ಹಿಂಪಡೆಯುವಿಕೆಗಾಗಿ ಎಟಿಎಂ ಇಂಟರ್‌ಚೇಂಜ್ ಶುಲ್ಕವನ್ನು 17 ರೂ.ಗಳಿಂದ 19 ರೂ.ಗಳಿಗೆ ಹೆಚ್ಚಿಸಲು ಅನುಮೋದನೆ ನೀಡಿದೆ. ದೇಶೀಯ ಹಣಕಾಸು ಮತ್ತು ಹಣಕಾಸುಯೇತರ ವಹಿವಾಟುಗಳಿಗೆ ಇಂಟರ್‌ಚೇಂಜ್ ಶುಲ್ಕ ಪರಿಷ್ಕರಿಸಲಾಗಿದೆ.
ಬಹುತೇಕ ಎಲ್ಲ ಬ್ಯಾಂಕುಗಳು ಇಂಟರ್‌ಚೇಂಜ್ ಶುಲ್ಕಗಳನ್ನು ಹೆಚ್ಚಿಸಿವೆ. ಎಟಿಎಂಗಳಲ್ಲಿ ಅನುಮತಿಸಿದ ಮಿತಿಗಿಂತ ಹೆಚ್ಚು ಬಾರಿ ಹಣ ವಿತ್ಡ್ರಾ ಮಾಡಿದರೆ ಶುಲ್ಕ ಕಟ್ಟಬೇಕಾಗುತ್ತದೆ. ಈ ಶುಲ್ಕದ ದರವನ್ನು ಇದೀಗ ಹೆಚ್ಚಿಸಲಾಗಿದೆ. ಮೇ 1ರಿಂದ ಈ ನಿಯಮ ಜಾರಿಗೆ ಬರಲಿದೆ. ನಿಗದಿತ ಮಿತಿಯನ್ನು ಮೀರಿ ಹೆಚ್ಚು ಬಾರಿ ವಿತ್ ಡ್ರಾ ಮಾಡಿದರೆ ಆಗ ಪ್ರತಿ ಹೆಚ್ಚುವರಿ ಟ್ರಾನ್ಸಾಕ್ಷನ್ಗೂ ನಿರ್ದಿಷ್ಟ ಶುಲ್ಕ ಇರುತ್ತದೆ. ಮೇ 1ರಿಂದ ಈ ಶುಲ್ಕದಲ್ಲಿ 1-2 ರೂ ಹೆಚ್ಚಳ ಮಾಡಲಾಗುತ್ತಿದೆ. ಕ್ಯಾಷ್ ವಿತ್ಡ್ರಾ ಮಾಡಿದರೆ ವಿಧಿಸುವ ಶುಲ್ಕವನ್ನು 17 ರೂನಿಂದ 19 ರೂಗೆ ಹೆಚ್ಚಿಸಲಾಗುತ್ತಿದೆ. ಅಕೌಂಟ್ ಬ್ಯಾಲನ್ಸ್ ಪರಿಶೀಲನೆ ಸೇರಿದಂತೆ ನಾನ್-ಟ್ರಾನ್ಸಾಕ್ಷನ್ ಶುಲ್ಕ 6 ರೂ. ಇದ್ದದ್ದು 7 ರೂ ಆಗುತ್ತದೆ ಎಂದು ಹೇಳಲಾಗಿದೆ.
ಅಂತೆಯೇ ದೇಶದ ಅತಿದೊಡ್ಡ ಬ್ಯಾಂಕಿಂಗ್ ಸಂಸ್ಥೆ ಎಸ್‌ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕೆನರಾ ಬ್ಯಾಂಕ್ ಮೊದಲಾದ ಪ್ರಮುಖ ಬ್ಯಾಂಕುಗಳು ತಮ್ಮ ಮಿನಿಮಮ್ ಬ್ಯಾಲನ್ಸ್ ನಿಯಮಗಳನ್ನು ಪರಿಷ್ಕರಿಸುತ್ತಿವೆ. ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬೇರೆ ಬೇರೆ ಮಿನಿಮಮ್ ಬ್ಯಾಲನ್ಸ್ ನಿಯಮಗಳನ್ನು ಅಳವಡಿಸಲಾಗುತ್ತಿದೆ.
ಸೇವಿಂಗ್ಸ್ ಬ್ಯಾಂಕ್ ಅಕೌಂಟ್ಗಳಲ್ಲಿ ನೀವೆಷ್ಟೇ ಹಣ ಬ್ಯಾಲೆನ್ಸ್ ಇಟ್ಟಿದ್ದರೂ ಬಡ್ಡಿದರ ಫ್ಲ್ಯಾಟ್ ಇರುತ್ತಿತ್ತು. 1,000 ರೂ ಇದ್ದವರಿಗೂ ಶೇ. 4, ಒಂದು ಲಕ್ಷ ಹಣ ಇಟ್ಟವರಿಗೂ ಶೇ. 4 ಬಡ್ಡಿ ಮಾತ್ರವೇ ಸಿಗುತ್ತದೆ. ಆದರೆ, ಈಗ ಬ್ಯಾಂಕುಗಳು ಈ ನಿಯಮ ಬದಲಾವಣೆ ಮಾಡುತ್ತಿವೆ. ಅಕೌಂಟ್ಗಳಲ್ಲಿ ಹೆಚ್ಚು ಹಣ ಇದ್ದರೆ ಹೆಚ್ಚು ಬಡ್ಡಿದರ, ಕಡಿಮೆ ಹಣ ಇದ್ದರೆ ಕಡಿಮೆ ಬಡ್ಡಿದರ ನಿಗದಿ ಮಾಡಲಾಗುತ್ತಿದ
ಎಸ್‌ಬಿಐ, ಐಡಿಎಫ್ಸಿ ಫಸ್ಟ್ ಬ್ಯಾಂಕ್ ಇತ್ಯಾದಿ ಪ್ರಮುಖ ಬ್ಯಾಂಕುಗಳು ತಮ್ಮ ವಿಸ್ತಾರ ಕ್ರೆಡಿಟ್ ಕಾರ್ಡ್ಗಳ ನಿಯಮದಲ್ಲಿ ಬದಲಾವಣೆ ಮಾಡುತ್ತಿವೆ. ಟಿಕೆಟ್ ವೋಚರ್, ರಿನಿವಲ್ ಲಾಭ, ಮೈಲ್ಸ್ಟೋನ್ ರಿವಾರ್ಡ್ ಇತ್ಯಾದಿ ಉತ್ತೇಜಕ ಪ್ಲಾನ್ಗಳನ್ನು ಕೈಬಿಡಲಾಗುತ್ತಿದೆ.