ಉಡುಪಿ: ಏಪ್ರಿಲ್ ತಿಂಗಳ ಮೊದಲ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ, ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಏಪ್ರಿಲ್ ತಿಂಗಳ ಆರಂಭದ ಮೂರು ದಿನಗಳಲ್ಲಿ ಗಂಟೆಗೆ 10 ರಿಂದ 3 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.