ಬೆಂಗಳೂರು: ತಾಯಿ ಸಾವನ್ನಪ್ಪಿದ್ದರಿಂದ ಮಗ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ.
ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಪತ್ತೆಹಚ್ಚಲಾಗಿದೆ.
ಮೃತರ ತಾಯಿ ಚಂದ್ರಿಕಾ ಸಹ ಕಳೆದ ಒಂದೂವರೆ ತಿಂಗಳ ಹಿಂದೆ ಸಾಲಭಾದೆಯಿಂದ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದರು. ಈತ ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಕುರಿತಾಗಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.