ಪುತ್ತೂರು : ಏ.10 ರಿಂದ 20 ರ ತನಕ ವೈಭವದಿಂದ ನಡೆಯಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಮಂಗಳವಾರ ಬೆಳಿಗ್ಗೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಗರ್ಭಗುಡಿಯಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ವಾದ್ಯದೊಂದಿಗೆ ಸ್ಥಳೀಯ ತೋಟವೊಂದರಲ್ಲಿ ವೆ.ಮೂರ್ತಿ ವಿ.ಎಸ್.ಭಟ್ ಗೊನೆ ಕಡಿಯುವ ಮೂಲಕ ಗೊನೆಮುಹೂರ್ತಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಶಾಸಕ ಅಶೋಕ್ ಕುಮಾರ್ ರೈ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ಒಳತ್ತಡ್ಕ, ಪಿ.ವಿ.ದಿನೇಶ್ ಕುಲಾಲ್, ವಿನಯ ಕುಮಾರ್ ಸುವರ್ಣ, ಸುಭಾಸ್ ರೈ ಬೆಳ್ಳಿಪ್ಪಾಡಿ, ಈಶ್ವರ ನಾಯ್ಕ ಬೆಡೇಕರ್, ನಳಿನಿ ಪಿ. ಶೆಟ್ಟಿ,, ಕೃಷ್ಣವೇಣಿ, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಕೆ.ವಿ., ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ಭಕ್ತಾದಿಗಳು ಉಪಸ್ಥಿತರಿದ್ದರು.