ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್ ಸಿಲಿಂಡರ್ ಬೆಲೆಯಲ್ಲಿ 41 ರೂ. ಇಳಿಕೆ ಮಾಡಿವೆ. ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಕಡಿತ ಘೋಷಿಸಿದ್ದು, ಅಡುಗೆ ಇಂಧನವನ್ನು ಅವಲಂಬಿಸಿರುವ ವ್ಯವಹಾರಗಳು ಮತ್ತು ಕೈಗಾರಿಕೆಗಳಿಗೆ ಇದರಿಂದ ಅನುಕೂಲವಾಗಲಿದೆ.
ತಕ್ಷಣದಿಂದ ಜಾರಿಗೆ ಬರುವಂತೆ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 41 ರೂ. ಕಡಿಮೆ ಮಾಡಲಾಗಿದೆ. ದೆಹಲಿಯಲ್ಲಿ ಪರಿಷ್ಕೃತ ಚಿಲ್ಲರೆ ಮಾರಾಟ ಬೆಲೆ ಈಗ ಪ್ರತಿ ಸಿಲಿಂಡರ್‌ಗೆ 1,762 ರೂ. ಆಗಿದೆ. ಕಡಿತದ ಮೊದಲು ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆ 1803 ರೂ.ಇತ್ತು. ಮುಂಬಯಿಯಲ್ಲಿ 1,714.50 ರೂ., ಕೋಲ್ಕತ್ತಾದಲ್ಲಿ 1,872 ರೂ., ಚೆನ್ನೈಯಲ್ಲಿ 1,924.50 ರೂ. ಪ್ರಸ್ತುತ ಬೆಲೆ ಇದೆ.
ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 14.2 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬಯಿಯಲ್ಲಿ 802.50 ರೂ. ಮತ್ತು ಚೆನ್ನೈನಲ್ಲಿ 818.50 ರೂ. ಇದೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ 1ನೇ ತಾರೀಕಿನಂದು ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸುತ್ತವೆ. ಅಗತ್ಯಕ್ಕೆ ಅನುಗುಣವಾಗಿ ಕಂಪನಿಗಳು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸುತ್ತವೆ ಅಥವಾ ಕಡಿಮೆ ಮಾಡುತ್ತವೆ. ಮಾರ್ಚ್ 1ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 6 ರೂ. ಹೆಚ್ಚಳವಾಗಿತ್ತು.