ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4 % ಮೀಸಲಾತಿ | ರದ್ದುಪಡಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

ಪುತ್ತೂರು: ಕರ್ನಾಟಕ ಸರಕಾರ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಆಯುಕ್ತರ ಸಹಾಯಕ ಪೂವಪ್ಪ ಅವರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದೆ.

ಸರಕಾರದ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಮಸೂದೆಯನ್ನು ಸಹ ಮಂಡಿಸಲಾಗಿದೆ. ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ ಸರಕಾರ ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ. ಇದನ್ನು ರದ್ದುಮಾಡುವಂತೆ ಮನವಿಯಲ್ಲಿ ಸಮಿತಿ ಉಲ್ಲೇಖಿಸಿದೆ.

ಕರ್ನಾಟಕ ಸರಕಾರ ಇತ್ತಿಚೇಗೆ ತನ್ನ ಬಜೆಟ್ ದಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿದೆ. ಅದರಲ್ಲಿ ಮುಸಲ್ಮಾನ ಕಾಲೋನಿಗಳಿಗೆ 1000 ಕೋಟಿ, ಮುಸಲ್ಮಾನ ಇಮಾಮರಿಗೆ ಮಾಸಿಕ 6000 ರೂಪಾಯಿ ವೇತನ, ಮುಸಲ್ಮಾನ ಹೆಣ್ಣುಮಕ್ಕಳ ಮದುವೆಗೆ 50 ಸಾವಿರ ರೂಪಾಯಿ, ಮುಸಲ್ಮಾನ ವಿದ್ಯಾರ್ಥಿಗಳ ವಿದೇಶೀ ಶಿಷ್ಯವೇತನಕ್ಕೆ 30 ಲಕ್ಷ ರೂ., ಮುಸಲ್ಮಾನ ಹೆಣ್ಣುಮಕ್ಕಳಿಗೆ ಆತ್ಮ ರಕ್ಷಣೆ ತರಬೇತಿ, ವಕ್ಸ್ ಬೋರ್ಡ ಆಸ್ತಿ ರಕ್ಷಣೆಗೆ 150 ಕೋಟಿ ರೂ. ಅನುದಾನ, ಮುಸಲ್ಮಾನರು ಬಹುಸಂಖ್ಯಾತರಿರುವ ಪ್ರದೇಶದಲ್ಲಿ ಐಟಿಐ ಕಾಲೇಜಿಗೆ ಮಂಜೂರಾತಿ, 100 ಉರ್ದುಶಾಲೆಗಳ ಸ್ಥಾಪನೆ, ಮುಸಲ್ಮಾನ ಯುವಕರ ಸ್ಟಾರ್ಟ ಆಪಗೆ ಸರಕಾರೀ ಸಹಾಯದನ, ಮುಸಲ್ಮಾನ ಮಕಳಿಗೆ ಪ್ರತಿ ಪರ ತರಬೇತಿ, ಹಜ್ ಭವನಕೆ, ಅನುದಾನ. ಹೀಗೆ ಸರಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನೆಪದಲ್ಲಿ 4500 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆಯ 34 ಸಾವಿರ ಸೀ ಗ್ರೇಡ್ ದೇವಸ್ಥಾನಗಳ ಅರ್ಚಕರಿಗೆ ಯಾವುದೇ ಸಂಬಳ ಇಲ್ಲ. ಆದರೆ ಇಮಾಮ್ ರಿಗೆ 6 ಸಾವಿರ ರೂಪಾಯಿ ಅನುದಾನ ನೀಡಲಾಗಿದೆ. ಅದಲ್ಲದೇ ಧಾರ್ಮಿಕ ದತ್ತಿ ಇಲಾಖೆಯ ಸೀ ಗ್ರೇಡ್ ನ ಸಾವಿರಾರು ದೇವಸ್ಥಾನಗಳು ಜೀರ್ಣೋದ್ದಾರ, ಸುಣ್ಣ ಬಣ್ಣ ಇಲ್ಲದೇ ಶಿಥಿಲಾವಸ್ಥೆಗೆ ತಲುಪಿವೆ. ಆದರೆ ಪ್ರಾಚೀನ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ಯಾವುದೇ ಅನುದಾನವಿಲ್ಲ. ಹೀಗೆ ಸರಕಾರವು ಸಾರ್ವಜನಿಕರ ತೆರಿಗೆ ಹಣವನ್ನು ಕೇವಲ ಒಂದೇ ಸಮುದಾಯದ ಅಭಿವೃದ್ಧಿಗೆ ವಿನಿಯೋಗಿಸುವುದು ಭಾರತದ ಸಂವಿಧಾನದ ಕಲಂ 14, 15 ರ ಉಲ್ಲಂಘನೆಯಾಗಿದೆ. ಹಾಗಾಗಿ ಸರಕಾರದ ಈ ವರ್ಷದ ಹಣಕಾಸು ವಿಧೇಯಕಕ್ಕೆ ಅನುಮೋದನೆ ನೀಡಬಾರದು ಎಂದು ಮನವಿಯಲ್ಲಿ ಸಮಿತಿ ಆಗ್ರಹಿಸಿದೆ.





























 
 

ಮನವಿ ನೀಡುವ ಸಂದರ್ಭ ಬಾಲಚಂದ್ರ  ಸೊರಕೆ, ರಾಜೇಶ್ ಪುತ್ತೂರು, ಸತೀಶ್  ಕರ್ವೆಲ್, ಶ್ರೀಧರ ಪೂಜಾರಿ ಪುತ್ತೂರು, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ನಾರಾಯಣ ಮಿತ್ತೂರು, ಕರ್ನಾಟಕ ಮಂದಿರ ಮಹಾ ಸಂಘ ದ ಜಿಲ್ಲಾ ಸಮನ್ವಯಕರಾದ ಬಾಲಕೃಷ್ಣ ಗೌಡ ನೆಲ್ಯಾಡಿ,, ಹಿಂದೂ ಜನಜಾಗೃತಿ ಸಮಿತಿಯ ದಾಮೋದರ, ಚಂದ್ರಶೇಖರ ಫನಿತೋಟ, ತಾರಾನಾಥ ಗೌಡ, ದಯಾನಂದ ಹೆಗ್ಡೆ ಪುತ್ತೂರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top