ಬೆಳ್ತಂಗಡಿ : ಆಟೋ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವೇಣೂರು ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನೌಶದ್ ಗಂಭೀರವಾಗಿ ಗಾಯಗೊಂಡ ಆಟೋ ಚಾಲಕ ಎನ್ನಲಾಗಿದೆ.
ಕಾರು ಚಾಲಕ ಲಾರಿಯೊಂದನ್ನು ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ನಡೆದಿದೆ. ಅತಿ ವೇಗದಿಂದ ಕಾರನ್ನು ಚಲಾಯಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದಿದೆ.
ಗಂಭೀರವಾಗಿ ಗಾಯಗೊಂಡಿರುವ ಆಟೋ ಚಾಲಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿdfdಉ, ಘಟನೆಯಿಂದ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.