ನವದೆಹಲಿ : ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ. ವಕ್ಫ್ ಮಸೂದೆ ಬಗ್ಗೆ ದೇಶಾದ್ಯಂತ ಭಾರಿ ಚರ್ಚೆ ನಡೆಯುತ್ತಿರುವಾಗಲೇ ಕಾಂಗ್ರೆಸ್ ನ್ಯಾಯಾಂಗ ಹೋರಾಟದ ನಿರ್ಧಾರಕ್ಕೆ ಬಂದಿದೆ.
ಕೇಂದ್ರದ ಈ ನಿರ್ಧಾರದ ಶೀಘ್ರದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ. ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಹುಮತದಿಂದ ಪಾಸ್ ಆಗಿದೆ.
ಈ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದ ಬಳಿಕ ಕಾಯಿದೆಯಾಗಿ ಜಾರಿಗೆ ಬರಲಿದೆ. ವಕ್ಫ್ ಮಸೂದೆ ಬಗ್ಗೆ ನಾನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿಲಿದ್ದೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಭಾರತದ ಸಂವಿಧಾನದಲ್ಲಿರುವ ತತ್ವಗಳು, ನಿಬಂಧನೆಗಳು ಮತ್ತು ತತ್ವಗಳ ಮೇಲೆ ಮೋದಿ ಸರ್ಕಾರ ದಾಳಿ ಮಾಡುತ್ತಿದೆ. ಅದನ್ನು ಖಂಡಿತವಾಗಿ ವಿರೋಧಿಸುತ್ತೇವೆ ಎಂದು ಹೇಳಿಕೊಂಡಿದ್ದಾರೆ. ವಕ್ಫ್ ಮಸೂದೆಗೆ ತಿದ್ದುಪಡಿ ಮಾಡಿರುವುದು ವಿರೋಧಿ ಎನ್ನುವುದು ಮಸೂದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಮತ್ತಿತರ ಪಕ್ಷಗಳ ವಾದ.