ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ, ಸಾರ್ವಜನಿಕರಿಂದ ಪುಷ್ಪಾರ್ಚನೆ | ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಚಾಲನೆ

ಮಂಗಳೂರು: ಬಾವುಟಗುಡ್ಡೆಯಲ್ಲಿ ಪ್ರತಿಷ್ಟಾಪಿಸಲಾಗಿರುವ ತುಳುನಾಡ ಅಮರ ಸುಳ್ಯ ಸ್ವಾತಂತ್ರ್ಯ ಸಮರದ ದಂಡನಾಯಕ ,ಸಂಘಟನ ಚತುರ,ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಗಣ್ಯರಿಂದ,ಸಾರ್ವಜನಿಕರಿಂದ ಪುಷ್ಪಾರ್ಚನೆ ಮತ್ತು ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದ ಸಂಸ್ಮರಣಾ ಕಾರ್ಯಕ್ರಮ ಹಾಗೂ ಚಿತ್ರಕಲಾ ಸ್ಪರ್ಧೆ ಶನಿವಾರ ನಡೆಯಿತು .

ಮಂಗಳೂರಿನ ಬಾವುಟಗಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ. ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ ದೀಪ ಪ್ರಜ್ವಲನೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಸಂಸದ ಬ್ರೀಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಮಂಜನಾಥ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ , ಭರತ್ ಮುಂಡೋಡಿ, ಸದಾನಂದ ಮಾವಜಿ ಪ್ರವೀಣ್ ಚಂದ್ರ ಆಳ್ವ, ಎಸಿ ವಿನಯ್ ರಾಜ್ ,ಕಿರಣ್ ಚಂದ್ರ ಪುಷ್ಪಗಿರಿ, ಡಾ ಸಚಿನ್ ನಡ್ಕ ಹಾಗೂ ವಿವಿಧಸಂಘ ಸಂಸ್ಥೆಯ ಅಧ್ಯಕ್ಷರುಗಳು ರಾಷ್ಟ್ರಾಭಿಮಾನಿಗಳು ಭಾಗವಹಿಸಿದ್ದರು.





























 
 

 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top