ಬೆಳ್ತಂಗಡಿ : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಏ.6ರಂದು ನಡೆಯಬೇಕಿದ್ದ ಸಭೆಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ನಾಳೆ ಧರ್ಮಸ್ಥಳದಿಂದ ಉಜಿರೆವರೆಗೆ ಮೆರವಣಿಗೆ ನಡೆಸಿ ಉಜಿರೆಯಲ್ಲಿ ಹಕ್ಕೊತ್ತಾಯ ಸಭೆ ನಡೆಸಲು ನಿರ್ಧರಿಸಲಾಗಿತ್ತು.
ಆರಂಭದಲ್ಲಿ ಈ ಪ್ರತಿಭಟನೆಗೆ ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಈ ಪ್ರತಿಭಟನೆಗೆ ಸಂಬಂಧಿಸಿ ವಾಟ್ಸಪ್ ಸೇರಿದಂತೆ ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಸಂದೇಶಗಳನ್ನು ಗಮನಿಸಿದ ಬಳಿಕ ಪರಿಸ್ಥಿತಿ ಗಂಭೀರವಾಗಿರುವುದನ್ನು ಅರಿತು ನ್ಯಾಯಾಲಯ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಪ್ರತಿಭಟನೆಗೆ ಅವಕಾಶ ನೀಡದಂತೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೊಳಪಡಿಸಿದ ನ್ಯಾಯಪೀಠ ಮೊದಲು ಶಾಂತಿಯುತವಾಗಿ ಮೆರವಣಿಗೆ ಮತ್ತು ಸಭೆ ನಡೆಸಲು ಅನುಮತಿ ನೀಡಿತ್ತು. ಆದರೆ ನಂತರ ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶ ನೀಡಿತು. ಈ ತಡೆಯಾಜ್ಞೆ ಮುಂದಿನ ವಿಚಾರಣೆಯ ತನಕ ಜಾರಿಯಲ್ಲಿರುತ್ತದೆ.
ಸೌಜನ್ಯಾ ಪ್ರಕರಣ : ನಾಳಿನ ಸಭೆಗೆ ಹೈಕೋರ್ಟ್ ತಡೆ
