ಪುತ್ತೂರು: ಕರ್ನಾಟಕ ಜಾನಪದ ಅಕಾಡೆಮಿಯ 2023 ನೆಯ ಸಾಲಿನ ಡಾ.ಜೀ.ಶಂ.ಪ ಜಾನಪದ ತಜ್ಞ ಪ್ರಶಸ್ತಿಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ. ಚಿನ್ನಪ್ಪ ಗೌಡರಿಗೆ ಪ್ರದಾನ ಮಾಡಲಾಯಿತು.

ಕನ್ನಡ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆಯವರು ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮತ್ತು ಇತರ ಗಣ್ಯರ ಸಮಕ್ಷಮದಲ್ಲಿ ಅಕಾಡೆಮಿಯ ಕಾರ್ಯಾಲಯದಲ್ಲಿ ಜರುಗಿದ ಸಮಾರಂಭದಲ್ಲಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು.