ಪುತ್ತೂರು: ಅಟೋ ಚಾಲಕನೋರ್ವ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಪುತ್ತೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಕಾಲೇಜಿಗೆ ರಜೆ ಇದ್ದ ಸಂದರ್ಭ ಮನೆಯಲ್ಲಿದ್ದ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕ ಮಂಜುನಾಥ್ ಕಟ್ಟಿತ್ತಡ್ಕ ಎಂಬಾತ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ.
ಕಳೆದ ಆಗಸ್ಟ್ ತಿಂಗಳಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭ ನೀರು ಕೇಳುವ ಮನೆಗೆ ಬಂದು ಅತ್ಯಾಚಾರ ಎನ್ನಲಾಗಿದೆ. ಈ ವಿಚಾರವನ್ನು ಯಾರಲ್ಲೂ ಹೇಳಬಾರದು ಎಂದು ಬೆದರಿಕೆ ಒಡ್ಡಿದ್ದು, 7-8 ಬಾರಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ. ಯುವತಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಕೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ., ಆರೋಪಿ ವಿರುದ್ಧ ದ.ಕ. ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.