ಬಂಟ್ವಾಳ: ಅಮ್ಮಾಡಿ ತನಿಯಮನೆ ನಿವಾಸಿ ಜೀವನ್ ತಾವೊ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸ್ ಠಾಣೆ ಸಿಬ್ಬಂದಿ ಬಂಧಿಸಿದ್ದಾರೆ.
ಕುರಿಯಾಳ ಮೂಲದ ಪ್ರವೀಣ್ ಡೆಸಾ ಮತ್ತು ರೋಹನ್ ಪಿಂಟೊ ಈ ಆರೋಪದಲ್ಲಿ ಬಂಧಿಸಲ್ಪಟ್ಟವರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.