ಸಿಂಗಾಪುರ: ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ನಟ ಪವನ್ ಕಲ್ಯಾಣ್ ಕಿರಿಯ ಮಗ ಮಾರ್ಕ್ ಶಂಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಕಿ ಅವಘಡದಲ್ಲಿ ಮಾರ್ಕ್ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರನ್ನು ಸಿಂಗಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪವನ್ ಕಲ್ಯಾಣ್ ಹಾಗೂ ಅನ್ನಾ ದಂಪತಿಗೆ 2017ರಲ್ಲಿ ಮಾರ್ಕ್ ಶಂಕರ್ ಜನಿಸಿದರು. ಸದ್ಯ ಪವನ್ ಕಲ್ಯಾಣ್ ಮೂರನೇ ಹೆಂಡತಿ ಅನ್ನಾ ಸಿಂಗಪುರದಲ್ಲೇ ಇದ್ದಾರೆ. ಮಾರ್ಕ್ ಶಂಕರ್ ಕೂಡ ಸಿಂಗಾಪುರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.