ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಿಗೆ ನಿನ್ನೆ ಸಂಜೆ ಸುರಿದ ಮಳೆಯಿಂದ ವಾತಾವರಣ ಕೊಂಚ ತಂಪಾಗಿದ್ದು, ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ನಿನ್ನೆ ಗಾಳಿ ಸಹಿತ ಉತ್ತಮ ಮಳೆಯಾಗಿದೆ.
ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್” ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.