ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮಾರ್ಚ್ ತಿಂಗಳ ಮೊತ್ತವನ್ನು ಆನಾರೋಗ್ಯ ಪೀಡಿತೆ ಮಹಿಳೆಗೆ ನೀಡಲಾಯಿತು.
ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ತೀವ್ರ ಕಷ್ಟದಲ್ಲಿರುವ ಜಯಂತಿ ಎಂಬವರಿಗೆ ಆಸ್ಪತ್ರೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿ ನೀಡಲಾಯಿತು.
ಈ ಸಂದರ್ಭದಲ್ಲಿ ವಜ್ರತೇಜಸ್ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಾಟಾಳಿ, ವಜ್ರತೇಜಸ್ ಕಾರ್ಯದರ್ಶಿ ಸಚಿನ್ ಶೆಣೈ, ಕೋಶಾಧಿಕಾರಿ ಗಣೇಶ್ ಕಾಮತ್, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಪ್ರಮುಖರಾದ ಪ್ರವೀಣ್ ಕೃಷ್ಣ ಹಸಂತಡ್ಕ, ಮನೋಜ್. ಕಿರಣ್ ಕುಂಜೂರುಪಂಜ ಉಪಸ್ಥಿತರಿದ್ದರು.