ಪುತ್ತೂರು: ವೃದ್ಧೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಕೆರೆಮೂಲೆ ಎಂಬಲ್ಲಿ ನಡೆದಿದೆ.
ಜಯಂತಿ (70) ಆತ್ಮಹತ್ಯೆ ಮಾಡಿಕೊಂಡ ವೃದ್ಯೆ.
ವಿಪರೀತ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.