ಬೆಂಗಳೂರು: ಕೂಲಿ ಕಾರ್ಮಿಕರು ವಾಸವಿದ್ದ 20ಕ್ಕೂ ಹೆಚ್ಚು ಶೆಡ್‌ಗಳು ಬೆಂಕಿಗಾಹುತಿ ಆಗಿರುವ ಘಟನೆ ಬೆಂಗಳೂರು ನಗರದ ವೀರಣ್ಣಪಾಳ್ಯ ಮುಖ್ಯ ರಸ್ತೆಯ ಬಳಿ ಇಂದು ಮುಂಜಾನೆ ನಡೆದಿದೆ. ಬೆಂಕಿ ಅವಘಡದಿಂದ ಆಟಿಕೆ ಫ್ಯಾಕ್ಟರಿಯ ಕಾರ್ಮಿಕರಿಗಾಗಿ ನಿರ್ಮಿಸಲಾಗಿದ್ದ 20 ಶೆಡ್‌ಗಳು ಪೂರ್ತಿಯಾಗಿ ಸುಟ್ಟುಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆಟಿಕೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಜನರಿಗಾಗಿ ವೀರಣ್ಣಪಾಳ್ಯ ಮುಖ್ಯರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿ ಶೆಡ್ಗಳನ್ನು ನಿರ್ಮಿಸಲಾಗಿದೆ. ಮೊದಲಿಗೆ ಒಂದು ಶೆಡ್ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಇತರ ಶೆಡ್ಗಳಿಗೂ ಹಬ್ಬಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಜನರು ಹೊರಗೆ ಓಡಿ ಬಂದಿದ್ದಾರೆ.
ಅನೇಕ ವರ್ಷಗಳಿಂದ ಚಿಕ್ಕ ಚಿಕ್ಕ ಶೆಡ್ಗಳಲ್ಲಿ 100ಕ್ಕೂ ಹೆಚ್ಚು ಜನರು ವಾಸವಿದ್ದರು.
ಬೆಂಗಳೂರು : 20ಕ್ಕೂ ಅಧಿಕ ಶೆಡ್‌ಗಳು ಬೆಂಕಿಗಾಹುತಿ
