ಪುತ್ತೂರು: ವಿಷುಕಣಿ ದಿನವಾದ ಸೋಮವಾರ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತಾದಿಗಳ ಗಡಣವೇ ತುಂಬಿತ್ತು.
ವಿಷುಕಣಿ ಹಬ್ಬದ ಅಂಗವಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ವಿಷುಕಣಿ ಬಲಿ ಉತ್ಸವ ನಡೆಯಿತು. ಬೆಳಿಗ್ಗೆ ಶ್ರೀ ದೇವಸ್ಥಾನದ ಗರ್ಭಗುಡಿಯಲ್ಲಿ ಕಣಿ ಇಡಲಾಯಿತು. ಬಳಿಕ ಒಳಾಂಗಣದಲ್ಲಿ ವಿಷುಕಣಿ ಬಲಿ ಉತ್ಸವ ನಡೆಯಿತು.
ಒಳಾಂಗಣದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತುಂಬಿದ್ದು, ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ದೇವಸ್ಥಾನ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ಒಳತ್ತಡ್ಕ, ಪಿ.ವಿ.ದಿನೇಶ್‍ಕುಲಾಲ್, ವಿನಯ ಕುಮಾರ್ ಸುವರ್ಣ, ಸುಭಾಸ್ ರೈ ಬೆಳ್ಳಿಪ್ಪಾಡಿ, ಈಶ್ವರ ನಾಯ್ಕ ಬೆಡೇಕರ್, ನಳಿನಿ ಪಿ. ಶೆಟ್ಟಿ,, ಕೃಷ್ಣವೇಣಿ, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್‍ಕೆ.ವಿ., ಮತ್ತಿತರರು ಉಪಸ್ಥಿತರಿದ್ದರು.
ಪೇಟೆ ಸವಾರಿ:
ಇಂದು ಶ್ರೀ ದೇವರು ಪೇಟೆ ಸವಾರಿಯಲ್ಲಿ ಕೊಂಬೆಟ್ಟು, ಬೊಳುವಾರು, ಹಾರಾಡಿ, ತಾಳೆಪ್ಪಾಡಿ, ದ್ರಾವಿಡ ಬ್ರಾಹ್ಮಣರ ಹಾಸ್ಟೇಲ್, ಸಕ್ಕರೆಕಟ್ಟೆಗೆ ತೆರಳಲಿದ್ದಾರೆ.