ಬಾಲಕನಿಗೆ ಆಟೋರಿಕ್ಷಾ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ 1.41 ಕೋ. ರೂ. ದಂಡ!

ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದ ಪ್ರಕರಣ

ಬೆಂಗಳೂರು: ಬಾಲಕನಿಗೆ ಆಟೋರಿಕ್ಷಾ ನೀಡಿ ಅಪಘಾತದಲ್ಲಿ ಒಬ್ಬರ ಸಾವಿಗೆ ಕಾರಣನಾದ ಆಟೋರಿಕ್ಷಾದ ಮಾಲೀಕನಿಗೆ ನ್ಯಾಯಾಲಯ ಬರೋಬ್ಬರಿ 1.41 ಕೋಟಿ ದಂಡ ವಿಧಿಸಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ನಡೆಸಿದ ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ ಎಸ್‌.ಗಾಣಿಗೇರ ಈ ದಂಡದ ಮೊತ್ತವನ್ನು ಮೃತನ ಕುಟುಂಬಕ್ಕೆ ನೀಡುವಂತೆ ಆದೇಶಿಸಿದ್ದಾರೆ.





























 
 

2021ರ ಮಾರ್ಚ್ 10ರಂದು ಯಲಬುರ್ಗಾದಲ್ಲಿ ಅಪಘಾತ ನಡೆದಿತ್ತು. ಈ ಅಪಘಾತದಲ್ಲಿ ಯಲಬುರ್ಗಾದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಗಂಗಾವತಿ ನಿವಾಸಿಯಾಗಿದ್ದ ರಾಜಶೇಖರ ಪಾಟೀಲ್ ಎಂಬವರು ಮೃತಪಟ್ಟಿದ್ದರು. ಈ ಘಟನೆಗೆ ಆಟೋರಿಕ್ಷಾ ಚಲಾಯಿಸುತ್ತಿದ್ದ 17 ವರ್ಷದ ಬಾಲಕನ ನಿರ್ಲಕ್ಷ್ಯ ಕಾರಣ ಎಂದು ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ವಯಸ್ಸಿನ ಡ್ರೈವಿಂಗ್‌ ಲೈಸೆನ್ಸ್‌ ಇಲ್ಲದ ಬಾಲಕನಿಗೆ ಆಟೊ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ ಈ ದೊಡ್ಡ ಮೊತ್ತದ ದಂಡ ವಿಧಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top