ಬೆಳ್ತಂಗಡಿ: ಬಾವಿಗೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.24 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆದಿದೆ.
ಮೃತ ವ್ಯಕ್ತಿ ಬೆಳ್ತಂಗಡಿ ನಿವಾಸಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾರವರ ಪತಿ ವಿನೋದ್ (48) ಎನ್ನಲಾಗಿದೆ.
ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.