ಪುತ್ತೂರು: ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆ ಸಿಂಧೂರ, ಈ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ ಲೇಖಕಿ ಶೀಲಾ ಲಕ್ಷ್ಮೀ ಅವರು ಬರೆದ ಕೃತಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ ಏ.27 ಆದಿತ್ಯವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯಲ್ಲಿರುವ ಅನ್ನ ಛತ್ರದಲ್ಲಿ ಬೆಳಗ್ಗೆ 9:30 ಕ್ಕೆ ಲೋಕಾರ್ಪಣೆ ಗೊಳ್ಳಲಿದೆ.
ಕಾರ್ಯಕ್ರಮದಲ್ಲಿ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.
ಮಂಗಳೂರು ದೇವಾಲಯ ಸಂವರ್ಧನ ಸಮಿತಿ, ಪುತ್ತೂರು ಮುಳಿಯ ಪ್ರತಿಷ್ಠಾನ ಸಹಯೋಗದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಕಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕ ಕಶೆಕೋಡಿ ಸೂರ್ಯನಾರಾಯಣ ಭಟ್ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ, ದೇವಾಲಯ ಸಂವರ್ಧನ ಸಮಿತಿಯ ವಿಭಾಗ ಪ್ರಮುಖ್ ಕೇಶವ ಪ್ರಸಾದ್ ಮುಳಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ ಪ್ರಮುಖ್ ಗಣೇಶ ಮಂಗಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಾವಯವ ಕುಂಕುಮದ ಅರಿವನ್ನುಂಟು ಮಾಡುವ ನೆಟ್ಟಿನಲ್ಲಿ, ಸಾವಯವ ಕುಂಕುಮ ಅನಾವರಣಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.