ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಎನ್.ಎಸ್.ಎಸ್ ಘಟಕ ಮತ್ತು ಸುಳ್ಯ ತಾಲೂಕು ಆರೋಗ್ಯ ಅಧಿಕಾರಿ ಕಛೇರಿ ಜಂಟಿಯಾಗಿ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮವನ್ನು ಏ.25 ಶುಕ್ರವಾರದಂದು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಯಾದ ಡಾ. ತ್ರಿಮೂರ್ತಿ ಅವರು ಉಪಸ್ಥಿತರಿದ್ದರು. ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಲೇರಿಯಾ ರೋಗವನ್ನು ತಡೆಗಟ್ಟುವುದರ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಹೆಲ್ತ್ ಇನ್ಸ್‍ಪೆಕ್ಟರ್ ಉಮರ್ ಖಾನ್ ಮತ್ತು ಸುಬ್ರಹ್ಮಣ್ಯ ವಲಯದ ಆಶಾ ಕಾರ್ಯಕರ್ತೆ ಜಯಂತಿ ಉಪಸ್ಥಿತರಿದ್ದರು. ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಆರತಿ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಸುಮಿತ್ರ ವಂದಿಸಿದರು.