ಕೋಲ್ಕತ್ತಾ: ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ಕೇಳಿ ಪ್ರವಾಸಿಗರನ್ನು ಸಾಯಿಸಿದ ಕೃತ್ಯದ ಬಳಿಕ ಪಶ್ಚಿಮ ಬಂಗಾಳದ ಬದುರಿಯಾದ ಶಾಲಾ ಶಿಕ್ಷಕರೊಬ್ಬರು ಇಸ್ಲಾಂ ಧರ್ಮ ತ್ಯಜಿಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಶಿಕ್ಷಕ ಸಬೀರ್ ಹುಸೇನ್, ಕಾಶ್ಮೀರ ಸೇರಿದಂತೆ ವಿವಿಧೆಡೆ ಧರ್ಮವನ್ನು ಹಿಂಸೆಗೆ ಆಯುಧವನ್ನಾಗಿ ಬಳಸಲಾಗುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ನಾನು ಇಸ್ಲಾಂನ್ನು ತ್ಯಜಿಸುತ್ತೇನೆ. ಯಾವ ಧರ್ಮದ ವ್ಯಾಪ್ತಿಗೂ ಒಳಪಡದೆ, ಕೇವಲ ಮಾನವನಾಗಿ ಗುರುತಿಸಿಕೊಳ್ಳಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ್ದರು. ಕರ್ನಾಟಕ ಮೂಲದ ಇಬ್ಬರು ಸಾವಿಗೀಡಾಗಿದ್ದರು.