ವ್ಯಕ್ತಿಯೋರ್ವನ ಕುತ್ತಿಗೆಗೆ ಚೂರಿಯಿಂದ ಇರಿತ | ಗಂಭೀರ ಗಾಯ

ಬೆಳ್ತಂಗಡಿ: ವ್ಯಕ್ತಿಯೊಬ್ಬನ ಕುತ್ತಿಗೆಗೆ ಹಾಗೂ ಎದೆಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ .

ಡೆನ್ನಿಸ್ ಪಿಂಟೋ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಕೊಲೆಗೈದವ ಸ್ಥಳೀಯ ನಿವಾಸಿ ಶೀನ ಎಂಬವರು ಆರೋಪಿಯಾಗಿದ್ದಾನೆ. ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ.26 ರಂದು ರಾತ್ರಿಯ ವೇಳೆ ಕ್ಷುಲ್ಲಕ ಕಾರಣಕ್ಕೆ ಆರೋಪಿ ಶೀನ ಎಂಬಾತ ಹಾಗೂ ಡೆನ್ನಿಸ್ ಪಿಂಟೋ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆ ಶೀನ ಡೆನ್ನಿಸ್ ಅನ್ನು ನೆಲಕ್ಕೆ ದೂಡಿ ಹಾಕಿ ಆತನ ಮೇಲೆ ಹತ್ತಿ ಕುಳಿತು ಕುತ್ತಿಗೆಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ. ಡೆನ್ನಿಸ್ ಪಿಂಟೊ ಅವರ ಕುತ್ತಿಗೆಗೆ ಗಂಭೀರವಾಗಿ ಗಾಯಗಳಾಗಿದ್ದು, ಈ ಬಗ್ಗೆ ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top