ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‍ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ

ಪುತ್ತೂರು: ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‍ ನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ.

ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕ್ರತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ. ಈ ಸಂದರ್ಭದಲ್ಲಿ ಜನರು  ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ. ಏಕೆಂದರೆ ಇದು ಕುಟುಂಬಕ್ಕೆ ಸಮೃದ್ದಿ ಮತ್ತು ಆದೃಷ್ಟವನ್ನು ತರುತ್ತದೆ ಎಂಬುದು ನಂಬಿಕೆ. ಆದ್ದರಿಂದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್  ತಮ್ಮೆಲ್ಲ ನೆಚ್ಚಿನ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಚಿನ್ನಾಭರಣಗಳ  ಖರೀದಿಯಲ್ಲಿ ಪ್ರತೀ 10 ಗ್ರಾಂಗೆ 2500 ರೂ. ವರೆಗೆ ರಿಯಾಯಿತಿ ಹಾಗೂ ವಜ್ರಾಭರಣಗಳ ಖರೀದಿಯಲ್ಲಿ ಪ್ರತಿ ಕ್ಯಾರೆಟ್‌ಗೆ 7000 ರೂ. ಕಡಿತ ಮತ್ತು ಬೆಳ್ಳಿಯ ಆಭರಣಗಳ ಖರೀದಿಗೆ ಪ್ರತಿ ಕೆ.ಜಿ.ಗೆ 3000 ರೂ ರಿಯಾಯಿತಿ ನೀಡಲಾಗುವುದು.

1957 ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದೆ. ವಿಶ್ವಾಸ, ಪರಿಶುದ್ದತೆ, ಪರಂಪರೆ, ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸಂಸ್ಥೆ ಮನೆಮಾತಾಗಿದೆ. ಎಲ್ಲಾ ವಯೋಮಿತಿಯ ಗ್ರಾಹಕರಿಗೆ ತಕ್ಕಂತೆ ಚಿನ್ನ ಹಾಗೂ ವಜ್ರಾಭರಣಗಳ ಆಯ್ಕೆ ಲಭ್ಯವಿದೆ. ಮಕ್ಕಳ, ಮಹಿಳೆಯರ ಹಾಗೂ ಪುರುಷರ ಆಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿರುವ ಚಿನ್ನ ಹಾಗೂ ವಜ್ರಾಭರಣಗಳ ಸಂಗ್ರಹವಿದ್ದು ಗ್ರಾಹಕರಿಗೆ ಆಹ್ಲಾದಕರ ಖರೀದಿಯ ವಾತಾವರಣ ಕಲ್ಪಿಸಲಾಗಿದೆ. ಪುರಾತನ ಆಭರಣಗಳ ವಿಭಾಗ “ಪ್ರಾಚಿ”ಯಲ್ಲಿ  ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಆಂಟಿಕ್ ಚಿನ್ನಾಭರಣಗಳ ವಿವಿಧ ವಿನ್ಯಾಸಗಳು ಲಭ್ಯವಿದೆ. 









https://screenapp.io/app/#/shared/8P4BcrrHNx























 
 

ಅದೇ ರೀತಿ ಗ್ಲೋ ವಜ್ರಾಭರಣ ವಿಭಾಗದಲ್ಲಿ ಸುಮಾರು ೨,೦೦೦ಕ್ಕೂ ಮಿಕ್ಕಿದ ಡಿಸೈನ್‌ಗಳಲ್ಲಿ ಪ್ರಜ್ವಲಿಸುವ ಅದ್ಬುತ ವಜ್ರಾಭರಣಗಳ ಸಂಗ್ರಹವಿದೆ. “ಪಾರ್ಥ” ಪುರುಷರ ಚಿನ್ನಾಭರಣಗಳ ವಿಭಾಗದಲ್ಲಿ ಪುರುಷರ ಕರ್ಟಿಯರ್ ಕಡ, ಲೇಸರ್ ಕಟ್ಟಿಂಗ್ ಕಡ, ಹೊಸ ವಿನ್ಯಾಸದ ಕ್ಯೂಬನ್ ಚೈನ್ಸ್, ಇಂಡೋ ಇಟಲಿಯನ್ ಚೈನ್ಸ್, ನವರತ್ನ ಉಂಗುರ, ವಿವಿಧ ವಿನ್ಯಾಸದ ಆಂಟಿಕ್ ಪದಕ, ಕಾಸ್ಟಿಂಗ್ ಪದಕ, ಹೊಸ ವಿನ್ಯಾಸದ ವಾಚ್ ಚೈನ್ಸ್ ಅಲ್ಲದೇ ಈ ಬಾರಿ  ಗ್ರಾಹಕರಿಗೆ ಕೈಗೆಟುವ ದರದಲ್ಲಿ ಗುಣಮಟ್ಟದಲ್ಲಿ ಕೊರತೆ ಆಗದಂತೆ ಅದೇ ವಿನ್ಯಾಸಗಳನ್ನು ಹೊಸ ತಂತ್ರಜ್ಞಾನದ ಮುಖಾಂತರ ಹೆಚ್ಚು ಕಾಲ ಬಾಳಿಕೆ ಬರುವಂತಹ ಲೈಟ್‌ವೈಟ್ ಆಭರಣಗಳು, ಕಲ್ಲಿನ ಆಭರಣಗಳಲ್ಲಿಯೂ ಲೈಟ್‌ವೈಟ್ ಕಲೆಕ್ಷನ್, ಪೇಪರ್ ಕಾಸ್ಟಿಂಗ್ ಆಭರಣಗಳು, ವೆರೈಟಿ ಆಫ್ ಕಲರ್ಸ್ ಆಭರಣಗಳು ಇನ್ನು ಹಲವು ವಿನೂತನ ವಿನ್ಯಾಸದ ಆಭರಣಗಳ ಸಂಗ್ರಹವಿದೆ.

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಷರತ್ತುಗಳ ಅನ್ವಯದೊಂದಿಗೆ ಈ ಕೊಡುಗೆ ತಮ್ಮ ಎಲ್ಲ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top