ಮಂಗಳೂರು: ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಗೆ ಆಕಸ್ಮಿಕವಾಗಿ ಅಗ್ನಿ ಸ್ಪರ್ಶಗೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಮಡ್ ಬ್ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ವೇಳೆ ಕೊಯನಾಡು ಸಮೀಪ ಲಾರಿಯಲ್ಲಿ ದಿಡೀರ್ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಚಾಲಕ ಲಾರಿಯನ್ನು ನಿಲ್ಲಿಸಿ ಇಳಿದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳದವರು, ಪೊಲೀಸರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.