ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಹಿಳೆಯೋರ್ವರು ಮೃತಪಟ್ಟ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಬೇಂಗತ್ತಡ್ಕದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ದೇವಪ್ಪ ನಾಯ್ಕ ಅವರ ಪತ್ನಿ ಭಾಗೀರಥಿ (59) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ ಮನೆಯ ಟೇರಸ್ ಮೇಲೆ ತೆರಳಿದ ಸಂದರ್ಭದಲ್ಲಿ ಪಂಪ್‌ಗೆ ಸೇರಿಸಲಾಗಿದ್ದ ವಯರ್ ಮೇಲೆ ಕಾಲಿಟ್ಟಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.