ಉಳ್ಳಾಲ: ನಿನ್ನೆ ರಾತ್ರಿ ಬಜಪೆ ಸಮೀಪ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಸಾಯಿಸಿದ ಹಿನ್ನೆಲೆಯಲ್ಲಿ ಮಂಗಳೂರು ಧಗಧಗಿಸುತ್ತಿರುವಾಗಲೇ ಸಮೀಪದ ಉಳ್ಳಾಲದಲ್ಲಿ ಇನ್ನೊಂದು ಮರಣಾಂತಿಕ ಹಲ್ಲೆ ಸಂಭವಿಸಿದೆ. ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಆತನಿಗೆ ಗಂಭೀರವಾದ ಗಾಯವಾಗಿದೆ.
ಈ ಘಟನೆ ತೊಕ್ಕೊಟ್ಟು ಒಳಪೇಟೆ ಬಳಿ ನಡೆದಿರುವುದು ವರದಿಯಾಗಿದೆ. ಗಾಯಗೊಂಡವನನ್ನು ಅಳೇಕಲ ನಿವಾಸಿ ಫೈಝಲ್ ಎಂದು ಗುರುತಿಸಲಾಗಿದೆ. ಫೈಝಲ್ ಕಲ್ಲಾಪು ಮಾರುಕಟ್ಟೆಗೆ ಬರುತ್ತಿದ್ದ ವೇಳೆ ಒಳಪೇಟೆ ಬಳಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಈ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.