ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವ ಹಿಂದೂ ಪರಿಷತ್ ಕರೆ ನೀಡಿದೆ.
ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ ಎಂದು ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.
ಎಲ್ಲಾ ವ್ಯಾಪಾರ, ವಹಿವಾಟು, ವಾಹನ ಸಂಚಾರ ಬಂದ್ ಮಾಡಲು ಕರೆ ನೀಡಲಾಗಿದೆ. ಸುಹಾಸ್ ಶೆಟ್ಟಿ ಮತ್ತು ಐವರು ಸಹಚರರು ಕಾರ್ ನಲ್ಲಿ ಹೋಗುತ್ತಿದ್ದರು. ಜಿಹಾದ್ ಇಸ್ಲಾಮಿಕ್ ಉಗ್ರ ಮುಸಲ್ಮಾನರು ಹತ್ಯೆ ಮಾಡಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂದು ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.
ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಿಂದೂ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದೆ. ಪೊಲೀಸ್ ಇಲಾಖೆ ವೈಫಲ್ಯದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಮಂಗಳೂರಿನಲ್ಲಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.