ಮಂಗಳೂರು: ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ನಡೆದಿದ್ದು, ಅವರ ಅಂತ್ಯಕ್ರಿಯೆ ಬಂಟ್ವಾಳದಲ್ಲಿ ನಡೆಯಲಿದೆ.

ಸುಹಾಸ್ ಶೆಟ್ಟಿ ಅವರ ಮೃತದೇಹ ಮೆರವಣಿಗೆ ಮೂಲಕ ತರಲಾಗುತ್ತಿದ್ದು, ಬಂಟ್ವಾಳ ದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಹತ್ಯೆ ಪ್ರಕರಣವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಶುಕ್ರವಾರ ದ.ಕ.ಜಿಲ್ಲಾದ್ಯಂತ ಬಂದ್ ಗೆ ಕರೆ ನೀಡಿದೆ. ಇಂದು ಬೆಳಿಗ್ಗೆ ಬಂದ್ ಗೆ ಕರೆ ನೀಡುತ್ತಿದ್ದಂತೆ ಮಂಗಳೂರಿನಲ್ಲಿ ಕೆಲವು ಬಸ್ ಗಳಿಗೆ ಕಲ್ಲು ತೂರಾಟ ನಡೆದ ಘಟನೆಯೂ ನಡೆಯಿತು.