ಮಾರ್ಚ್‌ನಲ್ಲೇ ಸುಹಾಸ್‌ ಶೆಟ್ಟಿ ಹತ್ಯೆಗೆ ಸ್ಕೆಚ್‌ : ಇನ್‌ಸ್ಟಾಗ್ರಾಂ ಪೋಸ್ಟರ್‌ನಿಂದ ಹುಟ್ಟಿದ ಅನುಮಾನ

ಹಂತಕರಿಗೆ ತಪ್ಪಿಸಿಕೊಳ್ಳಲು ಬುರ್ಖಾಧಾರಿ ಮಹಿಳೆಯರ ಸಹಾಯ?

ಮಂಗಳೂರು: ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ ಬಳಿಕ ಹಲವು ಬೆಳವಣಿಗೆಗಳು ನಡೆದಿದ್ದು, ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನಿಶ್’ ಅಂತ ಸೋಶಿಯಲ್​ ಮೀಡಿಯಾದಲ್ಲಿ ಒಂದು ಪೋಸ್ಟ್ ವೈರಲ್​ ಆಗಿದ್ದು, ಸದ್ಯ ಸಾಕಷ್ಟು ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ.

ಮಾರ್ಚ್ 31ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಸ್ಕೆಚ್‌ ಹಾಕಲಾಗಿತ್ತಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಅಂದೇ ಟಾರ್ಗೆಟ್ ಕಿಲ್ಲರ್-03 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಸುಹಾಸ್ ಶೆಟ್ಟಿ ಫೋಟೊ ಹಾಕಿ‌ ಶೀಘ್ರದಲ್ಲೇ ಸೇಡು ತೀರಿಸಿಕೊಳ್ಳುವುದಾಗಿ ಪ್ರಚೋದನಕಾರಿ ಪೋಸ್ಟ್ ಹಾಕಲಾಗಿತ್ತು.

















































 
 

ಈ ನಡುವೆ ಕೊಲೆ ನಡೆಸಿದ ಸ್ಥಳದಿಂದ ಹಂತಕರು ಕಾರೊಂದರಲ್ಲಿ ಪಲಾಯನ ಮಾಡುವ ದೃಶ್ಯದ ವೀಡಿಯೊ ಬಹಿರಂಗವಾಗಿದ್ದು, ಇದರಲ್ಲಿ ಹಂತಕರಿಗೆ ಬುರ್ಖಾಧಾರಿ ಮಹಿಳೆಯರಿಬ್ಬರು ಸಹಾಯ ಮಾಡುತ್ತಿರುವುದು ಕಂಡುಬರುತ್ತಿದೆ. ಹಂತಕರು ಕಾರು ಏರುತ್ತಿದ್ದಂತೆ ಓರ್ವ ಯುವತಿಯಂತೆ ಕಾನುವ ಬುರ್ಖಾಧಾರಿ ಮಹಿಳೆಯರು ಮೊಬೈಲ್‌ನಲ್ಲಿ ಮಾತನಾಡುತ್ತಾ ಅವರನ್ನು ಸಮೀಪಿಸುತ್ತಿರುವುದು ಮತ್ತು ಆಗ ಇನ್ನೋರ್ವ ಬುರ್ಖಾಧಾರಿ ಮಹಿಳೆ ಅಕೆಯನ್ನು ಎಳೆದುಕೊಂಡು ದೂರ ಹೋಗುತ್ತಿರುವುದು ಕಂಡುಬಂದಿದೆ. ನಂತರ ಬಿಳಿ ಕಾರು ಅಲ್ಲಿಂದ ವೇಗವಾಗಿ ಹೋಗಿದೆ. ಇಷ್ಟೆಲ್ಲ ಸಾರ್ವಜನಿಕರ ಎದುರೇ ನಡೆದಿದ್ದು, ಜನರು ಘಟನೆಯನ್ನು ನೋಡುತ್ತಾ ನಿಂತಿದ್ದರು. ಈ ವೀಡಿಯೊವನ್ನು ಅನೇಕ ಮಂದಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇತ್ತ ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ Troll_mayadiaka ಹೆಸರಿನ ಇನ್‌ಸ್ಟಾಗ್ರಾಂ ಪೇಜ್​ನಲ್ಲಿ ‘ಫಿನೀಶ್’ ಅಂತ ಪೋಸ್ಟ್​​ ಬಹಿರಂಗವಾಗಿತ್ತು. ಮಂಗಳೂರಿನಿಂದಲೇ ಹಲವು ನಕಲಿ ಇನ್‌ಸ್ಟಾಗ್ರಾಂ ಪೇಜ್​​ಗಳನ್ನು ನಿಯಂತ್ರಣ ಮಾಡಲಾಗುತ್ತಿದೆ. ಹತ್ಯೆ ಬೆನ್ನಲ್ಲೇ ವಿಡಿಯೋ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಲಾಗಿದೆ. ಜೊತೆಗೆ ‘Waiting for next wicket’ ಅಂತ ಪೋಸ್ಟ್​ ಮಾಡಲಾಗಿದೆ.

ಕೊಲೆಯಾದ ಸುಹಾಸ್‌ ಶೆಟ್ಟಿ ಹಿಂದೂ ಕಾರ್ಯಕರ್ತನಾಗಿದ್ದ. ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ. ಸುಹಾಸ್ ಶೆಟ್ಟಿ ವಿರುದ್ಧ ಒಟ್ಟು 5 ಪ್ರಕರಣಗಳಿದ್ದವು. ಬಜಪೆ ಠಾಣೆಯಲ್ಲಿ 3, ಬೆಳ್ತಂಗಡಿ, ಸುರತ್ಕಲ್ ಠಾಣೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದು, ಇನ್ನೆರಡು ವಿಚಾರಣೆ ಹಂತದಲ್ಲಿದ್ದವು. ಮತ್ತು ಎರಡರಲ್ಲಿ ಖುಲಾಸೆಗೊಂಡಿದ್ದರು.

ಕೊಲೆ, ಕೊಲೆಗೆ ಯತ್ನ ಆರೋಪ ಹಿನ್ನಲೆ ಪೊಲೀಸರು ರೌಡಿಶೀಟ್ ಓಪನ್ ಮಾಡಿದ್ದರು. ಸುರತ್ಕಲ್​​ನಲ್ಲಿ ನಡೆದಿದ್ದ ಫಾಜಿಲ್ ಕೊಲೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಒಂದನೆ ಆರೋಪಿಯಾಗಿದ್ದರು. ಮಾರ್ಚ್​​ನಲ್ಲಿ ಹೈಕೋರ್ಟ್​ನಿಂದ ಜಾಮೀನು ಪಡೆದು ಹೊರ ಬಂದಿದ್ದರು.

ಸಿನಿಮಾ ಸ್ಟೈಲ್​ನಲ್ಲಿ ಸುಹಾಸ್ ಕೊಲೆ

ಹಂತಕರು ಪಕ್ಕಾ ಪ್ಲ್ಯಾನ್ ಮಾಡಿಯೇ ಸುಹಾಸ್ ಶೆಟ್ಟಿಯ ಕತೆ ಮುಗಿಸಿದ್ದಾರೆ. ನಿನ್ನೆ ರಾತ್ರಿ 8.30ರ ಸುಮಾರು ಸುಹಾಸ್ ಶೆಟ್ಟಿ ತನ್ನ ಸಹಚರರ ಜೊತೆ ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದಾಗ ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರಿನ ಮೂಲಕ ಸುಹಾಸ್ ಕಾರನ್ನು ಚೇಸ್ ಮಾಡಿದ್ದಾರೆ. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ಮೀನಿನ ಟೆಂಪೋ ಮೂಲಕ ಸುಹಾಸ್ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ಸುಹಾಸ್ ಕಾರು ಸಲೂನ್‌ಗೆ ನುಗ್ಗಿದೆ. ಇದೇ ವೇಳೆ ಸ್ವಿಫ್ಟ್ ಕಾರಿನಲ್ಲಿದ್ದ ನಾಲ್ವರು ಹಂತಕರು ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕರ ಕಣ್ಣೆದುರೇ ಸುಹಾಸ್‌ ಮೇಲೆ ಮುಗಿಬಿದ್ದಿದ್ದಾರೆ. ರಸ್ತೆಯಲ್ಲೇ ಕೊಚ್ಚಿಕೊಂದಿದ್ದಾರೆ. ಭೀಕರ ಹತ್ಯೆಯ ಲೈವ್ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top