ಮಂಗಳೂರು: ಗುರುವಾರ ಸಂಜೆ ಮಂಗಳೂರಿನ ಬಜ್ಪೆ ಪರಿಸರ ಹಾಗೂ ಉಳ್ಳಾಲದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 5 ರ ತನಕ ನಿಷೇದಾಜ್ಞೆ ಜಾರಿ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿರುತ್ತಾರೆ.
ಗುರುವಾರ ಸಂಜೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ಬೆನ್ನಲ್ಲೆ ಉಳ್ಳಾಲದಲ್ಲಿ ಗುಂಪೊಂದು ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿತ್ತು.
ಈ ಎರಡು ಪ್ರಕರಣದ ನಡೆದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರವಾಗಿ ನಿಷೇದಾಜ್ಞೆ ಆದೇಶ ಹೊರಡಿಸಿದ್ದಾರೆ.