ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡು ದಟ್ಟ ಹೊಗೆ ವ್ಯಾಪಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಉಸಿರುಗಟ್ಟಿದ ಪರಿಣಾಮ ಸಾವುಗಳು ಸಂಭವಿಸಿವೆ.
ಅಗ್ನಿಶಾಮಕ ಪಡೆಯ ನೆರವಿನಿಂದ ಪರಿಸ್ಥಿತಿಯನ್ನು ಕ್ಷಿಪ್ರವಾಗಿ ಹತೋಟಿಗೆ ತರಲಾಗಿದ್ದು, 200ಕ್ಕೂ ಅಧಿಕ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದಲ್ಲಿ ಅಗ್ನಿಅವಘಡ ಸಂಭವಿಸಿದೆ ಎನ್ನಲಾಗಿದೆ.