ಬೆಂಗಳೂರು: ಲಾರಿ ಮತ್ತು ಕಾರು ಮುಖಾಮುಖಿ ದಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಈಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ಗುರುತಿಸಲಾಗಿದೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.