ಮಂಗಳೂರು : ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಕರೆ ಗೆ ನೀಡಿದ ಬೆನ್ನಲ್ಲೇ ಹಿಂದೂ ಮುಖಂಡ ಶರಣ್ ಪಂಪ್ ವೇಲ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಗಳಿಗೆ ಕಲ್ಲೆಸೆದು ಹಾನಿ ಮಾಡಲಾಗಿದೆ. ಈ ವೇಳೆ BNS ಕಾಯ್ದೆ 353 (2) 196 (b) (1) 49 ಹಾಗೂ 324 (2) (4) (5) ರಡಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.