ಮಂಗಳೂರು : ನಗರದ ಬಜೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಾಪ್ ಗ್ರೂಪ್ ನಲ್ಲಿ ಮನೀಶ್ ಎಸ್.ಎಂಬ ಹೆಸರಿನವರು “ನಮ್ಮ ಕಾರ್ಯಕರ್ತನಾದ ಸುಹಾಸ್ ಬಜ್ಜೆಯ ಹತ್ಯೆಯನ್ನು ಖಂಡಿಸಿ ಇಂದು ಬೆಳಗ್ಗೆ 6:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ದ ಕ ಜಿಲ್ಲೆ ಸಂಪೂರ್ಣ ಬಂದ್. ಸುಹಾಸ್ ರವರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ನಮ್ಮ ಬಲವನ್ನು ಈಗ ತೋರಿಸದೇ ಇದ್ದಲ್ಲಿ ಮುಂದೊಂದು ದಿನ ನಾವೇ ಇರುವುದಿಲ್ಲ. ಹಿಂದೂ ಸಾಗರದ ಬಿಂದು ಬಿಂದುಗಳೇ ಒಟ್ಟಾಗೋಣ, ಬಲಿದಾನ ವ್ಯರ್ಥವಾಗದಿರಲಿ” ಎಂಬುದಾಗಿ ಪೋಸ್ಟ್ ಮಾಡಿದ್ದು, ಸದ್ರಿ ಪೋಸ್ಟ್ನ ಅಧಾರದಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಾಧ ಕ್ರಮಾಂಕ: 57/2025 ಕಲಂ. 192 ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಿಸಿದ್ದು, ಪ್ರಕರಣವನ್ನು ಮುಂದಿನ ತನಿಖೆಯ ಸಲುವಾಗಿ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಸದ್ರಿ ಪ್ರಕರಣದಲ್ಲಿ ತನಿಖೆ ಕೈಗೊಂಡು ವಾಟ್ಸಾಪ್ ಗ್ರೂಪನಲ್ಲಿ ಮನೀಶ್ ಎಸ್. ಎಂಬ ಹೆಸರಿನಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡಿದ್ದ ವ್ಯಕ್ತಿಯಾದ ಯುವಕನನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ