ಆಪರೇಷನ್‌ ಸಿಂಧೂರ್‌ : ಪಾಕಿಸ್ಥಾನದ 9 ಉಗ್ರ ನೆಲೆಗಳ ಮೇಲೆ ಭಾರತ ದಾಳಿ

ಅನೇಕ ಉಗ್ರರು ಸತ್ತಿರುವುದಾಗಿ ವರದಿ; ಪಾಕಿಸ್ಥಾನದಲ್ಲಿ ಭೀತಿಯ ವಾತಾವರಣ

ಮುಂಜಾನೆ 1.45ಕ್ಕೆ ನಡೆದ ವಾಯುದಾಳಿ; ಭಾರತದ ಎಲ್ಲ ಪೈಲಟ್‌ಗಳು ಸುರಕ್ಷಿತವಾಗಿ ವಾಪಸ್‌

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ಥಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಬಾಂಬ್‌ ದಾಳಿ ಮಾಡಿ ಸೇಟು ತೀರಿಸಿಕೊಂಡಿದೆ.
ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ತಡರಾತ್ರಿ 1.44ಕ್ಕೆ ದಾಳಿ ನಡೆಸಿದೆ. ರಫೇಲ್‌ ಯುದ್ಧ ವಿಮಾನಗಳನ್ನು ಬಳಸಿ ಪಾಕಿಸ್ಥಾನ ಮತ್ತು ಪಾಕಿಸ್ಥಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ಏರ್‌ ಸ್ಟ್ರೈಕ್‌ ನಡೆದಿದೆ. ಈ ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ.

















































 
 

ಉಗ್ರರ 9 ನೆಲೆಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದೇವೆ. ಯಾವುದೇ ಪಾಕಿಸ್ಥಾನಿ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ. ಗುರಿ ಮಾಡಲಾದ 9 ಸ್ಥಳಗಳಲ್ಲಿ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ ಪ್ರಧಾನ ಕಚೇರಿ ಮತ್ತು ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೈಬಾ ನೆಲೆ ಸೇರಿದೆ ಎಂದು ಮೂಲಗಳು ತಿಳಿಸಿವೆ.

ಒಂಬತ್ತು ಗುರಿಗಳಲ್ಲಿ ನಾಲ್ಕು ಪಾಕಿಸ್ಥಾನದಲ್ಲಿ ಮತ್ತು ಐದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದವು. ಪಾಕಿಸ್ಥಾನದಲ್ಲಿರುವ ಗುರಿಗಳಲ್ಲಿ ಬಹಾವಲ್ಪುರ್, ಮುರಿಡ್ಕೆ ಮತ್ತು ಸಿಯಾಲ್‌ಕೋಟ್‌ ಸೇರಿವೆ. ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಲು ವಿಶೇಷ ನಿಖರ ಯುದ್ಧ ಸಾಮಗ್ರಿಗಳನ್ನು ಬಳಸಲಾಗಿದೆ.

ಭಾರತದ 26 ಸಹೋದರಿಯರ ಕುಂಕುಮ ಅಳಿಸಿದ್ದಕ್ಕೆ ನಡೆಸಿದ ಪ್ರತೀಕಾರಕ್ಕೆ ʼಆಪರೇಷನ್ ಸಿಂಧೂರʼ ಎಂಬ ಹೆಸರನ್ನು ಇಡಲಾಗಿದೆ. ಉಗ್ರರ ಶಿಬಿರಗಳನ್ನು ಧ್ವಂಸ ಮಾಡಲಾಗಿರುವ ವಿಡಿಯೋಗಳು ಹರಿದಾಡುತ್ತಿವೆ.

ಪಹಲ್ಗಾಮ್‌ ದಾಳಿಗೆ ಪ್ರತೀಕಾರ ತೀರಿಸುವುದಾಗಿ ಭಾರತ ಪ್ರತಿಜ್ಞೆ ಮಾಡಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿ ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರು.

ಭಾರತ ಪಾಕಿಸ್ಥಾನದ 9 ಕಡೆಗಳಲ್ಲಿ ವಾಯು ದಾಳಿ ನಡೆಸಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ಹಿಂದೂಗಳ ಮೇಲೆ ನಡೆಸಿದ ದಾಳಿಯ ಪ್ರತೀಕಾರವನ್ನು ಭಾರತ ತೀರಿಸಿಕೊಂಡಿದೆ. ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಬಹವಾಲ್ಪುರ್, ಕೋಟ್ಲಿ, ಮುರಿಡ್ಕೆ, ಬಾಗ್ ಮತ್ತು ಮುಜಫರಾಬಾದ್‌ಗಳ ಮೇಲೆ ದಾಳಿ ನಡೆಸಿದೆ. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಅಡಗುತಾಣಗಳು ಇವು. ಭಾರತ ಮಹಿಳೆಯರು ಮತ್ತು ಮಕ್ಕಳ ಮೇಲೆ ಗುಂಡು ಹಾರಿಸುತ್ತಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿದ್ದಾರೆ.

ಮಸೀದಿಗಳಿಂದ ಘೋಷಣೆ

ಭಾರತವು ಪಾಕಿಸ್ಥಾನದ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದ ನಂತರ ಪಾಕಿಸ್ತಾನದ ಮಸೀದಿಗಳಿಂದ ಘೋಷಣೆ ಕೇಳಿಬಂದಿವೆ.. ಪಾಕಿಸ್ತಾನದಾದ್ಯಂತ ಭಯದ ವಾತಾವರಣವಿದೆ. ಜನರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳನ್ನು ತಲುಪುವಂತೆ ಮಸೀದಿಗಳ ಮೂಲಕ ಮನವಿ ಮಾಡಲಾಗುತ್ತಿದೆ. ಈ ಸಮಯದಲ್ಲಿ ಮನೆಗಳಲ್ಲಿ ಯಾರೂ ಇರಬಾರದು. ಜನರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ಹೋಗುತ್ತಿದ್ದಾರೆ, ಮಸೀದಿಗಳಿಂದ ಜನರು ತಮ್ಮ ಮನೆಗಳನ್ನು ತೊರೆಯುವಂತೆ ಘೋಷಣೆಗಳು ಬರುತ್ತಿವೆ, ಸರ್ಕಾರವು ಈ ಸಂದೇಶವನ್ನು ಸಾರ್ವಜನಿಕರಿಗೆ ತಿಳಿಸಲು ಅವರನ್ನು ಕೇಳಿದೆ.

ಯಾವ್ಯಾವ ಸ್ಥಳಗಳ ಮೇಲೆ ಭಾರತ ದಾಳಿ ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಬಹವಾಲ್ಪುರ್, ಕೋಟ್ಲಿ, ಮುರಿಡ್ಕೆ, ಬಾಗ್ ಮತ್ತು ಮುಜಫರಾಬಾದ್‌ಗಳ ಮೇಲೆ ದಾಳಿ ನಡೆಸಿದೆ. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಅಡಗುತಾಣಗಳು ಇವು. ಭಾರತ ಮಹಿಳೆಯರು ಮತ್ತು ಮಕ್ಕಳ ಮೇಲೆ ಗುಂಡು ಹಾರಿಸುತ್ತಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿದ್ದಾರೆ. ಮಸೀದಿಗಳು ಧ್ವಂಸಗೊಂಡಿವೆ.

ಪಾಕಿಸ್ಥಾನ ಅವ್ಯವಸ್ಥಿತ

ಪಾಕಿಸ್ತಾನದಲ್ಲಿ ಅವ್ಯವಸ್ಥೆ ಸೃಷ್ಟಿ ಪಾಕಿಸ್ಥಾನದ ಲಾಹೋರ್ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪ್ರಯಾಣಿಕರಿಗೆ ತಕ್ಷಣವೇ ಟರ್ಮಿನಲ್ ಖಾಲಿ ಮಾಡುವಂತೆ ಆದೇಶಿಸಲಾಗಿದೆ. ದಾಳಿಯ ನಂತರ, ಅನೇಕ ವಿಮಾನಗಳನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವು ವಿಮಾನಗಳನ್ನು ಬೇರೆಡೆಗೆ ತಿರುಗಿಸಲಾಗಿದೆ.

ವಾಯುದಾಳಿಯ ನಂತರ, ಪಾಕಿಸ್ಥಾನದಾದ್ಯಂತ ಮತ್ತು ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆಯ ಸ್ಥಿತಿ ನಿರ್ಮಾಣವಾಗಿದೆ. ಪಾಕಿಸ್ತಾನದ ಲಾಹೋರ್ ಮತ್ತು ಸಿಯಾಲ್‌ಕೋಟ್ ವಿಮಾನ ನಿಲ್ದಾಣಗಳನ್ನು ಮುಂದಿನ 48 ಗಂಟೆಗಳ ಕಾಲ ಮುಚ್ಚಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top