ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟಣೆ ಶಿರ್ಲಾಲುವಿನಲ್ಲಿ ನಡೆದಿದೆ. ಪರಿಣಾಮ ಆಕೆ ಗರ್ಭಾವತಿಯಾಗಿದ್ದು, ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಲೈಂಗಿಕ ಕಿರುಕುಳ ನೀಡಿದವ ಶಿರ್ಲಾಲು ಗ್ರಾಮದ ಸನತ್ (28ವ) ಎಂಬವನು ಎಂದು ಗುರುತಿಸಲಾಗಿದೆ.
ಆರೋಪಿ ಸನತ್ ಬಾಲಕಿಯ ತಂದೆಯ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಆಗಾಗ ಮನೆಗೆ ಬಂದವನು ಬಾಲಕಿ ಜೊತೆ ಸಲುಗೆಯಿಂದ ಇದ್ದನೆನ್ನಲಾಗಿದೆ. 2024 ಮೇ. 22ರಂದು ಬಾಲಕಿಯ ಜನ್ಮ ದಿನದ ಕಾರ್ಯಕ್ರಮಕ್ಕೆ ಬಂದು ಆರೋಪಿ ರಾತ್ರಿ ಉಳಿದುಕೊಂಡಿದ್ದು, ರಾತ್ರಿ ಮಲಗಿದ ಕೋಣೆಗೆ ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದನೆಂದು ದೂರಿನಲ್ಲಿ ಆರೋಪಿಸಲಾಗಿದೆ.
ತದನಂತರದ ದಿನಗಳಲ್ಲಿ ಆಗಾಗ ರಾತ್ರಿ ಕಾಲದಲ್ಲಿ ಬಂದು ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಇದೀಗ ಆರೋಪಿ ಸನತ್ ವಿರುದ್ಧ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ವೇಣೂರು ಪೊಲೀಸ್ ಠಾಣಾ ಅ.ಕ್ರ: 41/2025 ಕಲಂ: 64 BNS-2023: 4,6 ಪೋಕ್ಸೋ ಕಾಯಿದೆ 2012 ರಂತೆ ಪ್ರಕರಣ ದಾಖಲಾಗಿದೆ.