ದ್ವೇಷಪೂರಿತ ಪೋಸ್ಟ್‌ಗಳನ್ನು ಲೈಕ್, ಫಾರ್ವರ್ಡ್ ಮಾಡಿದರೂ ಕೇಸ್
ಮಂಗಳೂರು: ಇತ್ತೀಚಿನ ದಿನಗಳಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಗುಂಪುಗಳು ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ದ್ವೇಷ, ಸುಳ್ಳು ಮಾಹಿತಿ ಮತ್ತು ಬೆದರಿಕೆ ಸಂದೇಶಗಳನ್ನು ಹರಡುವುದನ್ನು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ರೀತಿಯ ಪೋಸ್ಟ್‌ಗಳನ್ನು ಹಾಕುವವರು ಪರಿಣಾಂ ಎದುರಿಸಲು ಸಿದ್ಧರಾಗಿರಬೇಕೆಂದು ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಎಚ್ಚರಿಸಿದ್ದಾರೆ.
ಕಳೆದ ವಾರವೊಂದರಲ್ಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ 30ಕ್ಕೂ ಹೆಚ್ಚು ಇಂಥ ಪ್ರಕರಣಗಳು ದಾಖಲಾಗಿವೆ. ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಎಸಿಪಿ ನೇತೃತ್ವದ ವಿಶೇಷ ತನಿಖಾ ತಂಡ ಈ ಪ್ರಕರಣಗಳ ತನಿಖೆ ನಡೆಸುತ್ತಿದೆ ಮತ್ತು ಈಗಾಗಲೇ ಹಲವಾರು ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕೆಲವು ಅಪರಾಧಿಗಳು ನಕಲಿ ಪ್ರೊಫೈಲ್‌ಗಳು ಅಥವಾ ವಿದೇಶಗಳಲ್ಲಿ ನೋಂದಾಯಿಸಲಾದ ಖಾತೆಗಳ ಮೂಲಕ ಪೋಸ್ಟ್ ಮಾಡುತ್ತಿದ್ದಾರೆ ಎಂದು ಅನುಪಮ್ ಅಗರ್‌ವಾಲ್ ಹೇಳಿದರು.
ದ್ವೇಷಪೂರಿತ ವಿಷಯವನ್ನು ಫಾರ್ವರ್ಡ್ ಮಾಡುವುದನ್ನು ತಡೆಯುವಂತೆ ಪೊಲೀಸ್ ಆಯುಕ್ತರು ನಾಗರಿಕರಿಗೆ ಮನವಿ ಮಾಡಿದ್ದಾರೆ. ಅಂತಹ ಪೋಸ್ಟ್‌ಗಳನ್ನು ಸಿಇಎನ್ ಪೊಲೀಸ್ ಠಾಣೆಗೆ ವರದಿ ಮಾಡಬೇಕು ಮತ್ತು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಸಹಾಯ ಮಾಡಲು ಅಗತ್ಯ ಮಾಹಿತಿಯನ್ನು ಒದಗಿಸಬೇಕು ಎಂದಿದ್ದಾರೆ.