ಸುಳ್ಯ : ಸೇವಾಜೆ ನಿವಾಸಿ ಜನಾರ್ಧನ್ (30 ವ.) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕ ಜನಾರ್ದನ್ ಎನ್ನಲಾಗಿದೆ. ಅವರ ವಿವಾಹ ನಿಶ್ಚಯವಾಗಿದ್ದು, ಕೆಲ ದಿನಗಳಲ್ಲೇ ಹಸಮಣೆ ಏರಬೇಕಿತ್ತು. ಅಷ್ಟರಲ್ಲೇ ಇಂತಹ ನಿರ್ಧಾರ ಕೈಗೊಳ್ಳಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ.
ಜನಾರ್ದನ್ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.