ಪುತ್ತೂರು: ಕಾಶ್ಮೀರದಲ್ಲಿ ಪಹಲ್ಗಾಮದಲ್ಲಿ ಹಿಂದೂಗಳ ಹತ್ಯೆ ಮಾಡಿದ್ದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿದ ಸಿಂಧೂರ ಆಪರೇಷನ್ ಹಾಗೂ ಮುಂದಿನ ದಿನಗಳಲ್ಲಿ ಭಾರತೀಯ ಸೇನೆಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಪುತ್ತೂರು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಲಾಯಿತು.
ಶ್ರೀ ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಮಾರ್ತ, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.