ಯುದ್ಧದ ಕರ್ತವ್ಯದಲ್ಲಿದ್ದ ಅಧಿಕಾರಿಗೆ ಬಡಿದ ಶೆಲ್
ಶ್ರೀನಗರ: ಕಾಶ್ಮೀರದ ರಾಜೋರಿ ಜಿಲ್ಲೆಯಲ್ಲಿ ಪಾಕಿಸ್ಥಾನ ನಾಗರಿಕರ ಮೇಲೆ ಶನಿವಾರ ಮುಂಜಾನೆ ನಡೆಸಿದ ಶೆಲ್ ದಾಳಿಯಲ್ಲಿ ಸರಕಾರಿ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಿಲ್ಲಾ ಹೆಚ್ಚುವರಿ ಅಭಿವೃದ್ಧಿ ಆಯುಕ್ತ ರಾಜ್‌ಕುಮಾರ್ ಥಾಪಾ ಎಂಬವರು ಮೃತಪಟ್ಟು ಅವರ ಕಚೇರಿಯ ಇಬ್ಬರು ಸಿಬ್ಬಂದಿ ಶೆಲ್ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಸರಕಾರ ತಿಳಿಸಿದೆ.
ಶೆಲ್ ಬಡಿದಾಗ ಥಾಪಾ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಸರಕಾರಿ ಮೆಡಿಕಲ್ ಕಾಲೇಜಿಗೆ ದಾಖಲಿಸಿದರೂ ಥಾಪಾ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಇಬ್ಬರು ಸಿಬ್ಬಂದಿಯ ಸ್ಥಿತಿ ಚಿಂತಾಜನಕವಾಗಿದೆ. ನಿನ್ನೆ ಇಡೀ ದಿನ ಥಾಪಾ ಉಪಮುಖ್ಯಮಂತ್ರಿ ಜೊತೆ ಇದ್ದು, ಯುದ್ಧದ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದರು. ಆನ್‌ಲೈನ್ ಮೀಟಿಂಗ್‌ನಲ್ಲೂ ಭಾಗವಹಿಸಿದ್ದರು ಎಂದು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಹೇಳಿದ್ದಾರೆ.