ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತವಾದ ಘಟನೆ ಕಬಕದಲ್ಲಿ ನಡೆದಿದೆ ಅಪಘಾತದ ಪರಿಣಾಮ ಬೈಕ್ ಸವಾರ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಪುತ್ತೂರು ಮಂಗಳೂರು ಹೆದ್ದಾರಿ ಕಬಕ ಕುವೆತ್ತಿಲ ಸಮೀಪ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ನರಿಕೊಂಬು ನಿವಾಸಿ ಅರುಣ್ ಕುಲಾಲ್ ಮೃತಪಟ್ಟಿದ್ದು, ಅವರ ಮಗ ಧ್ಯಾನ್ ಗಂಭೀರ ಗಾಯವಾಗಿದೆ. ಪುತ್ತೂರಿನಿಂದ ಮಂಗಳೂರಿನ ಕಡೆ ಹೋಗುತ್ತಿದ್ದ ಬಸ್ ಮಾಣಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದೊಯಿದರು ಓರ್ವ ದಾರಿ ಮಧ್ಯೆ ಪ್ರಾಣ ಬಿಟ್ಟಿದ್ದಾರೆಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲಿಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.