ಭಾರತ ಮತ್ತು ವಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ, ಐಪಿಎಲ್ 2025 ಅನ್ನು ಒಂದು ವಾರದವರೆಗೆ ಸ್ಥಗಿತಗೊಳಿಸಿದ ಅದ್ದರಿಂದ ಈ ವಾರ ನಿಗದಿಯಾಗಿದ್ದ ಎಲ್ಲಾ ಪಂದ್ಯಗಳನ್ನು ಮುಂದೂಡಲಾಗಿತ್ತು.
ಇದೀಗ ಮತ್ತೆ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಪುನರಾರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮೇ 15 ಅಥವಾ 16 ರಂದು ಟೂರ್ನಿಯನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಶನಿವಾರ ಸಂಜೆ ಭಾರತ ಮತ್ತು ಪಾಕಿಸ್ತಾನ್ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಈ ಬೆಳವಣಿಗೆ ನಡೆದಿದ್ದು, ಹೀಗಾಗಿ ಈ ವಾರದಲ್ಲೇ ಟೂರ್ನಿ ಮತ್ತೆ ನಡೆಯುವುದು ಬಹುತೇಕ ಖಚಿತವಾಗಿದೆ.
ಮೇ 9 ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಯುದ್ಧ ಭೀತಿ ಹಿನ್ನಲೆಯಲ್ಲಿ ಅರ್ಧದಲ್ಲೇ ಸ್ಥಗಿತಗೊಳಿಸಲಾಗಿತ್ತು.